News Karnataka Kannada
Thursday, April 25 2024
ತಮಿಳುನಾಡು

ಸೆಲ್ಫಿ ವಿಡಿಯೋ ಮಾಡುತ್ತಿದ್ದಾಗ ರೈಲು ಡಿಕ್ಕಿ : ಯುವಕ ಸಾವು

Untitled 101
Photo Credit :

ಚೆನ್ನೈ : ಯುವಕನೋರ್ವ ಸೆಲ್ಫಿ ವೀಡಿಯೋ ಮಾಡಿಕೊಳ್ಳಲು ಯತ್ನಿಸುತ್ತಿದ್ದ ವೇಳೆ ರೈಲಿಗೆ ಸಿಲುಕಿ ಸಾವನ್ನಪ್ಪಿದ ಘಟನೆ ವಲ್ಲೂರು ಜಿಲ್ಲೆಯ ಗುಡಿಯಾಟ್ಟಂಖ ಬಳಿ ನಡೆದಿದೆ. ವಸಂತ್ ಕುಮಾರ್(23) ಮೃತ ವ್ಯಕ್ತಿ. ಕೇಬಲ್ ಟಿವಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು.

ಸಾಮಾಜಿಕ ಜಾಲತಾಣಗಳಲ್ಲಿ ಅಪ್‍ಲೋಡ್ ಮಾಡಲು ರೀಲ್ಸ್ ಹಾಗೂ ವೀಡಿಯೋವನ್ನು ಮಾಡುತ್ತಿದ್ದರು.

ಈ ಹಿನ್ನೆಲೆಯಲ್ಲಿ ಗುಡಿಯಾಟ್ಟಂ ಬಳಿಯ ಮೆಲತ್ತೂರು,ರೈಲು ನಿಲ್ದಾಣಕ್ಕೆ ರೀಲ್ಸ್ ಮಾಡಲು ಗೆಳೆಯರೊಂದಿಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ.

ರೈಲ್ವೆ ನಿಲ್ದಾಣದಲ್ಲಿ ಸೆಲ್ಫಿ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಬೇಕು ಎಂದು ಕೊಂಡಿದ್ದ. ಈ ಹಿನ್ನೆಲೆಯಲ್ಲಿ ವೀಡಿಯೋ ಮಾಡುತ್ತಿದ್ದ ವೇಳೆ ಚಲಿಸುತ್ತಿದ್ದ ರೈಲಿಗೆ ಸಿಲುಕಿದ್ದಾನೆ. ಇದರಿಂದಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮಾಹಿತಿ ಪಡೆದ ಜೋಲಾರಪೇಟೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಗುಡಿಯಾಟ್ಟಂ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು