News Karnataka Kannada
Tuesday, April 30 2024
ತಮಿಳುನಾಡು

ಅಣ್ಣಾ ಮಲೈ ಪ್ರತಿಭಟನೆಗೆ ಈ ಡೋಂಟ್‌ ಕೇರ್‌ ಎಂದ ಮುಖ್ಯ ಮಂತ್ರಿ ಬೊಮ್ಮಾಯಿ

Basavaraja Bommai
Photo Credit :

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೇಕೆದಾಟು ಯೋಜನೆ ವಿರೋಧಿಸಿ ಧರಣಿ ನಡೆಸುತ್ತಿರುವ ಕರ್ನಾಟಕ ಕೇಡರ್​ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಗ್ಗೆ ಪ್ರತ್ರಿಕ್ರಿಯೆ ನೀಡಿ ಅಣ್ಣಾಮಲೈ ಪ್ರತಿಭಟನೆಗೆ ಐ ಡೋಂಟ್ ಕೇರ್. ಅವನನ್ನು ಅಷ್ಟು ದೊಡ್ಡ ವ್ಯಕ್ತಿ ಮಾಡುವ ಅವಶ್ಯಕತೆಯಿಲ್ಲ ಎಂದು ಗುಡುಗಿದ್ದಾರೆ.
ಮೇಕೆದಾಟು ಯೋಜನೆ ವಿರೋಧಿಸಿ ಅಣ್ಣಾಮಲೈ ಧರಣಿ ನಡೆಸುತ್ತಿರುವುದು ರಾಜಕೀಯ ಪ್ರೇರಿತ. ನಾವೂ ಅದನ್ನು ರಾಜಕೀಯ ಪ್ರೇರಿತ ಮಾಡುವುದು ಬೇಡ. ಹೆಚ್ಚುವರಿ ನೀರು ಸಂಗ್ರಹಿಸಲು ಮೇಕೆದಾಟು ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಬೆಂಗಳೂರಿಗೆ ನೀರು ಪೂರೈಸುವುದಕ್ಕೆ ಸಂಗ್ರಹಿಸಲಾಗುತ್ತಿದೆ. ಗೊತ್ತಿದ್ದೂ ಪ್ರತಿಭಟನೆ ಮಾಡಿದ್ರೆ ಅದು ರಾಜಕೀಯ ಪ್ರೇರಿತ ಆಗುತ್ತದೆ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಹಿಂದೆಯೂ ಈ ಕುರಿತು ಸಿಎಂ ಬೊಮ್ಮಾಯಿ ತಮ್ಮ ನಿಲುವನ್ನು ದೆಹಲಿಯಲ್ಲಿ ಸ್ಪಷ್ಟಪಡಿಸಿದ್ದರು. ಅಣ್ಣಾಮಲೈ ಉಪವಾಸ ಬೇಕಾದ್ರೂ ಮಾಡಲಿ, ಊಟ ಬೇಕಾದ್ರು ಮಾಡಲಿ. ಮೇಕೆದಾಟು ಡ್ಯಾಂ ನಿರ್ಮಾಣ ಮಾಡಲು ನಮಗೆ ಹಕ್ಕಿದೆ. ನಾವು ಮೇಕೆದಾಟು ಅಣೆಕಟ್ಟು ನಿರ್ಮಿಸಿಯೇ ತೀರುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದರು.
ಇಂದೂ ಕೂಡ ಬೊಮ್ಮಾಯಿ ಮೇಕೆದಾಟು ಯೋಜನೆ ಮಾಡೇ ಮಾಡುತ್ತೇವೆ ಎಂಬ ಪ್ರತಿಕ್ರಿಯೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು