ಬೆಂಗಳೂರು: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ವಿಪಕ್ಷ ನಾಯಕ ಎನ್. ಚಂದ್ರಬಾಬು ನಾಯ್ಡು ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ, ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಕೋವಿಡ್ ಸೋಂಕು ದೃಢಪಟ್ಟಿರುವ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ.
ಚಂದ್ರಬಾಬು ನಾಯ್ಡು ಅವರು ಮನೆಯಲ್ಲೇ ಕ್ವಾರಂಟೈನ್ ಆಗಿದ್ದು, ತಮ್ಮ ನಿಕಟ ಸಂಪರ್ಕಕ್ಕೆ ಬಂದಿದ್ದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ಸುರಕ್ಷಿತವಾಗಿರಿ ಎಂದು ಹೇಳಿದ್ದಾರೆ.