News Karnataka Kannada
Sunday, May 05 2024
ತಮಿಳುನಾಡು

ಉಕ್ರೇನ್​ನಲ್ಲಿ ಸಿಲುಕಿದ ಮಗನ ಚಿಂತೆಯಲ್ಲೇ ಪ್ರಾಣಬಿಟ್ಟ ತಾಯಿ

Dead Body
Photo Credit :

ತಿರುಪತ್ತೂರ್(ತಮಿಳುನಾಡು) : ರಷ್ಯಾ ದಾಳಿಯಿಂದಾಗಿ ಉಕ್ರೇನ್​ನಲ್ಲಿ ಅಂದಾಜು 13 ಸಾವಿರ ಭಾರತೀಯರು ಸಿಲುಕಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ತಮ್ಮ ಮಕ್ಕಳನ್ನು ರಕ್ಷಿಸುವಂತೆ ಕೇಂದ್ರ ಸರ್ಕಾರಕ್ಕೆ ಪೋಷಕರು ಮನವಿ ಮಾಡುತ್ತಿದ್ದಾರೆ.

ಈ ಮಧ್ಯೆ ಉಕ್ರೇನ್​ನಲ್ಲಿ ಸಿಲುಕಿರುವ ತನ್ನ ಮಗನ ಬಗ್ಗೆ ತೀವ್ರವಾಗಿ ಚಿಂತಿಸುತ್ತಿದ್ದ ತಾಯಿಯೊಬ್ಬರು ಮೃತಪಟ್ಟಿದ್ದಾರೆ. ಯುದ್ಧಪೀಡಿತ ದೇಶದಿಂದ ಸ್ವದೇಶಕ್ಕೆ ಬರಲು ಸಾಧ್ಯವಾಗದ ಮಗ ವಿಡಿಯೋ ಕರೆಯಲ್ಲೇ ಅಮ್ಮನ ಪಾರ್ಥಿವ ಶರೀರದ ದರ್ಶನ ಪಡೆದಿದ್ದು ಮನಕಲಕುವಂತಿತ್ತು.

ತಮಿಳುನಾಡಿನ ತಿರುಪತ್ತೂರು ಜಿಲ್ಲೆಯ ಪುದೂರಿನ ಶಶಿಕಲಾ ಮೃತ ಮಹಿಳೆ. ಶಂಕರ್ ಮತ್ತು ಶಶಿಕಲಾ ದಂಪತಿಯ ಮಗ ಶಕ್ತಿವೆಲ್ ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದು, ಉಕ್ರೇನ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಇತ್ತ ಮೊದಲೇ ಬಿಪಿ ಮತ್ತು ಡಯಾಬಿಟಿಸ್​ನಿಂದ ಬಳಲುತ್ತಿದ್ದ ಶಶಿಕಲಾ ಉಕ್ರೇನ್​ನಲ್ಲಿ ಯುದ್ಧ ಆರಂಭವಾದ ಬಳಿಕ ಮಗನ ಪರಿಸ್ಥಿತಿ ಬಗ್ಗೆ ತೀವ್ರವಾಗಿ ಚಿಂತಿಸುತ್ತಿದ್ದರಂತೆ. ಫೆ.26 ರ ಸಂಜೆ ಅಸ್ವಸ್ಥರಾಗಿ ಕುಸಿದು ಬಿದ್ದ ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ ಆಸ್ಪತ್ರೆಗೆ ದಾಖಲಿಸಿದ ಕೆಲವೇ ಹೊತ್ತಿನಲ್ಲಿ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ.

ಶಕ್ತಿವೇಲ್ ಉಕ್ರೇನ್​ನಲ್ಲಿ ಸಿಲುಕಿಕೊಂಡಿದ್ದು, ತಾಯಿನ ಅಂತ್ಯಸಂಸ್ಕಾರಕ್ಕೆ ಬರುವ ಸ್ಥಿತಿಯಲ್ಲಿರಲಿಲ್ಲ. ಅಂತೆಯೇ, ಪೋಷಕರು ವಿಡಿಯೋ ಕರೆಯಲ್ಲೇ ಮಗನಿಗೆ ತಾಯಿಯ ಮೃತದೇಹದ ಅಂತಿಮ ದರ್ಶನ ಮಾಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು