News Karnataka Kannada
Monday, May 13 2024
ತಮಿಳುನಾಡು

ಐಐಟಿ ಮದ್ರಾಸ್‌ ಕ್ಯಾಂಪಸ್‌ನಲ್ಲಿ ಮತ್ತೆ 18 ಮಂದಿಗೆ ಕೋವಿಡ್

Covid
Photo Credit :

ಚೆನ್ನೈ; ಐಐಟಿ ಮದ್ರಾಸ್‌ ಕ್ಯಾಂಪಸ್‌ನಲ್ಲಿ ಮತ್ತೆ 18 ಜನರಿಗೆ ಸೋಂಕು ತಗುಲಿದೆ. ಎರಡು ದಿನದಲ್ಲಿ 30 ಪ್ರಕರಣಗಳು ದಾಖಲಾಗಿವೆ.

ಗುರುವಾರ ಐಐಟಿ ಕ್ಯಾಂಪಸ್‌ನಲ್ಲಿ 12 ಜನರಿಗೆ ಸೋಂಕು ತಗುಲಿತ್ತು. ಶುಕ್ರವಾರ ಮತ್ತೆ 18 ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸೋಂಕು ತಗುಲಿದ ವಿದ್ಯಾರ್ಥಿಗಳು, ಸಿಬ್ಬಂದಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ತಮಿಳುನಾಡಿನ ಆರೋಗ್ಯ ಇಲಾಖೆ ಕಾರ್ಯದರ್ಶಿ ಜೆ. ರಾಧಾಕೃಷ್ಣನ್ ಗುರುವಾರ ಸಂಜೆ ಐಐಟಿ ಮದ್ರಾಸ್ ಕ್ಯಾಂಪಸ್‌ಗೆ ಭೇಟಿ ನೀಡಿದ್ದರು. ಕ್ಯಾಂಪಸ್‌ ಆಡಳಿತ ಮಂಡಳಿ ಜೊತೆ ಚರ್ಚೆ ನಡೆಸಿದ್ದರು.

ಹೊಸ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ತಮಿಳುನಾಡು ಸರ್ಕಾರ ಆರೋಗ್ಯ ಇಲಾಖೆ ಪರೀಕ್ಷೆಗಳನ್ನು ಹೆಚ್ಚಿಸುವಂತೆ ಸೂಚನೆ ನೀಡಿದೆ. ಪ್ರತಿದಿನ 25 ಸಾವಿರ ಮಾದರಿಗಳ ಪರೀಕ್ಷೆ ನಡೆಸಬೇಕು ಎಂದು ನಿರ್ದೇಶನ ನೀಡಿದೆ.

ಚೆನ್ನೈ ನಗರದಲ್ಲಿ ಕಳೆದ ಹಲವು ದಿನಗಳಿಂದ ಹೊಸ ಕೋವಿಡ್ ಪ್ರಕರಗಳ ಸಂಖ್ಯೆ 20ರ ಗಡಿ ದಾಟಿಲ್ಲ. ಚೆಂಘಲ್ ಪೇಟ್, ವೆಲ್ಲೂರು, ತಾಂಜಾವೂರು, ಕಾಚೀಪುರಂ, ತಿರುವಳ್ಳೂರು ಮುಂತಾದ ಕಡೆ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿ ದಾಟಿಲ್ಲ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು