ಚೆನ್ನೈ: ಮದ್ರಾಸ್ನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ-ಎಂ)ಯಲ್ಲಿ ಹೊಸದಾಗಿ 25 ಮಂದಿಗೆ ಕೋವಿಡ್ ದೃಢಪಟ್ಟಿದ್ದು, ಕೊರೊನಾ ವೈರಸ್ ಸೋಂಕಿತರ ಒಟ್ಟು ಸಂಖ್ಯೆ 55ಕ್ಕೆ ಏರಿದೆ ಎಂದು ತಮಿಳುನಾಡು ಆರೋಗ್ಯ ಕಾರ್ಯದರ್ಶಿ ಜೆ ರಾಧಾಕೃಷ್ಣನ್ ಹೇಳಿದ್ದಾರೆ.
ಐಐಟಿ-ಎಂ ಆವರಣದಲ್ಲಿರುವ 19 ಹಾಸ್ಟೆಲ್ಗಳಲ್ಲಿ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ಇತರ ರಾಜ್ಯಗಳ ವಿದ್ಯಾರ್ಥಿಗಳನ್ನು ಹೊಂದಿರುವ ಹಾಸ್ಟೆಲ್ನಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿದೆ ಎಂದು ಅವರು ಹೇಳಿದ್ದಾರೆ.
ಸರ್ಕಾರವು ಕೋವಿಡ್ -19 ಪರೀಕ್ಷೆಗಳ ಸಂಖ್ಯೆಯನ್ನು ದಿನಕ್ಕೆ 18,000 ದಿಂದ 25,000 ಕ್ಕೆ ಹೆಚ್ಚಿಸಲಿದೆ ಎಂದೂ ಅವರು ಹೇಳಿದರು.
ಅಲ್ಲಿನ ರಾಜ್ಯ ಸರ್ಕಾರದ ಪ್ರಕಟಣೆ ಪ್ರಕಾರ, ಶುಕ್ರವಾರ ತಮಿಳುನಾಡಿನಲ್ಲಿ 57 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 286 ರಷ್ಟಿದೆ.