ಕಲ್ಲು ಕ್ವಾರಿಯಲ್ಲಿ ಸಿಲುಕಿದ್ದ ಆರು ಮಂದಿ ಕಾರ್ಮಿಕರು : ಇಬ್ಬರ ರಕ್ಷಣೆ

ತಮಿಳುನಾಡು : ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯ ಮುನ್ನೀರಪಳ್ಳಂ ಬಳಿಯ ಅಡೈಮಿತಿಪ್ಪಂಕುಳಂನಲ್ಲಿ 250 ಅಡಿ ಆಳದ ಕಲ್ಲು ಕ್ವಾರಿಯೊಂದರಲ್ಲಿ ಶನಿವಾರ ರಾತ್ರಿ ದೈತ್ಯ ಬಂಡೆಯೊಂದು ಉರುಳಿ ಬಿದ್ದ ಪರಿಣಾಮ ಆರು ಮಂದಿ ಕಾರ್ಮಿಕರು ಅದರಲ್ಲಿ ಸಿಲುಕಿಕೊಂಡಿದ್ದು, ಇಬ್ಬರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯು ತಡರಾತ್ರಿ 11.30 ರ ಸುಮಾರಿಗೆ ನಡೆದಿದೆ. ಕ್ವಾರಿಯಲ್ಲಿ ಸಿಲುಕಿದ ಕಾರ್ಮಿಕರನ್ನು ಲಾರಿ ಚಾಲಕರಾದ ನತ್ತರ್ಕುಲಂನ ವಿಜಯ್ ಮತ್ತು ವಿಟ್ಟಿಲಪುರಂನ ಮುರುಗನ್ ಎಂಬ ಇಬ್ಬರು ಕಾರ್ಮಿಕರನ್ನು ರಕ್ಷಿಸಿದ್ದಾರೆ. ಇತರ ನಾಲ್ವರನ್ನು ಹೊರತೆಗೆಯಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸ್ ಮಹಾನಿರೀಕ್ಷಕ (ದಕ್ಷಿಣ ವಲಯ) ಆಸ್ರಾ ಗಾರ್ಗ್ ತಿಳಿಸಿದ್ದಾರೆ.

ಹೆವಿ-ಡ್ಯೂಟಿ ಕ್ರೇನ್‌ಗಳು ಮತ್ತು ರಾಕ್ ಕ್ಲೈಂಬಿಂಗ್ ಪರಿಣಿತರು ಸಹ ಪೊಲೀಸ್ ಮತ್ತು ಅಗ್ನಿಶಾಮಕ ಸೇವಾ ಸಿಬ್ಬಂದಿ ನೇತೃತ್ವದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಅಲ್ಲದೇ ಇಂದು ಬೆಳಗ್ಗೆ ರಕ್ಷಣಾ ಕಾರ್ಯಾಚರಣೆಗೆ ಹೆಲಿಕಾಪ್ಟರ್ ಕೂಡ ತರಲಾಗಿದ್ದು, ಸಿಕ್ಕಿಬಿದ್ದ ಕಾರ್ಮಿಕರನ್ನು ರಕ್ಷಿಸಲು ಬಂಡೆಯನ್ನು ಒಡೆಯುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನೂ ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

Ashika S

Recent Posts

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

2 mins ago

ತೃತೀಯ ಲಿಂಗಿಯ ಹತ್ಯೆ ಪ್ರಕರಣ: ಮಹಿಳೆಯ ಬಂಧನ

ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.

20 mins ago

ಬಿಗ್‌ಬಾಸ್‌ 16 ಸ್ಪರ್ಧಿ ʼಅಬ್ದು ರೋಝಿಕ್‌ʼಗೆ ಮದುವೆಯಂತೆ

ಬಿಗ್‌ಬಾಸ್‌ 16ನಲ್ಲಿ ಸ್ಪರ್ಧಿಸಿದ್ದ ಅಬ್ದು ರೋಝಿಕ್‌ ವಿಡಿಯೋವೊಂದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾನೀಗ ಪ್ರೀತಿಗೆ ಬಿದ್ದಿದ್ದು, ಜುಲೈ 7ರಂದು ಮನಮೆಚ್ಚಿದ…

30 mins ago

ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

45 mins ago

ಸೊಳ್ಳೆ ‘ಟ್ವೀಟ್ ಕಳುಹಿಸುವ’ ಫೋಟೋ ವೈರಲ್‌

ನಾವು ಪ್ರತಿದಿನ ಸೋಶಿಯಲ್‌ ಮಿಡಿಯಾಗಳಲ್ಲಿ ಹಲವಾರು ಟ್ವೀಟ್‌ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್‌ ಗಳು ನಮ್ಮನ್ನು ನಗುವಂತೆ…

60 mins ago

ಪಾಕಿಸ್ತಾನವನ್ನು ನಾವು ಗೌರವಿಸಬೇಕು ಎಂದ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌

ಈ ಹಿಂದೆಯೂ ಪಾಕಿಸ್ತಾನವನ್ನು ಹಾಡಿಹೊಗಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್‌ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌ ಈಗ ಮತ್ತೊಂದು ವಿವಾದಾತ್ಮಕ…

1 hour ago