ಚೆನ್ನೈ : ಕಾನೂನು ವಿದ್ಯಾರ್ಥಿ ಅಬ್ದುಲ್ ರಹೀಂ(21) ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ವಕೀಲರು ಮತ್ತು ಕಾನೂನು ವಿದ್ಯಾರ್ಥಿಗಳು ಪುಲಿಯಾಂತೋಪ್ನ ಉಪ ಪೊಲೀಸ್ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಿದ ನಂತರ ಗುರುವಾರ, ಪೊಲೀಸ್ ಇನ್ಸ್ಪೆಕ್ಟರ್ ಸೇರಿದಂತೆ 9 ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಎಂಕೆಬಿ ನಗರದ ಮಹಿಳಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನಜೀಮಾ ಮತ್ತು ಎಂಟು ಪೊಲೀಸ್ ಸಿಬ್ಬಂದಿ ಕಳೆದ ಶುಕ್ರವಾರ ಕಾನೂನು ವಿದ್ಯಾರ್ಥಿಗೆ ಥಳಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಒಬ್ಬ ಪೊಲೀಸ್ ಪೇದೆ ಮತ್ತು ಹೆಡ್ ಕಾನ್ಸ್ಟೆಬಲ್ ಅವರನ್ನು ಅಮಾನತುಗೊಳಿಸಲಾಗಿತ್ತು.
ಕಳೆದ ಶುಕ್ರವಾರ ಕೊಡುಂಗೈಯೂರು ಬಳಿಯ ಎಂಆರ್ ನಗರದಲ್ಲಿ ಮಾಸ್ಕ್ ಧರಿಸದ ಐದನೇ ವರ್ಷದ ಕಾನೂನು ವಿದ್ಯಾರ್ಥಿ ರಹೀಂಗೆ ಪೊಲೀಸರು ಕಪಾಳಮೋಕ್ಷ ಮಾಡಿ, ಬಂಧಿಸಿದ್ದರು. ನಂತರ ರಹೀಂನನ್ನು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
ನಂತರ ಠಾಣೆಯಲ್ಲೇ ಪೊಲೀಸರು ತನಗೆ ಥಳಿಸಿ, ಬೂಟಿನಿಂದ ಒದ್ದರು ಎಂದು ರಹೀಂ ಆರೋಪಿಸಿದ್ದರು. ಅಲ್ಲದೆ ಠಾಣೆಯೊಳಗೆ ಪೊಲೀಸರು ಹೇಗೆ ತನ್ನ ಮೇಲೆ ಹಲ್ಲೆ ನಡೆಸಿದರು ಎಂಬುದನ್ನು ವೀಡಿಯೊ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿತ್ತು.
ಗುರುವಾರ ಬೀದಿಗಿಳಿದ ವಕೀಲರು ಪೊಲೀಸ್ ಇನ್ಸ್ಪೆಕ್ಟರ್ ನಜೀಮಾ ವಿರುದ್ಧ ಎಫ್ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದರು. ಅಲ್ಲದೆ ರಹೀಂ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ದೂರಿದರು.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…