ಚಂಡಮಾರುತ ಪ್ರಭಾವ : ಕರಾವಳಿ ತೀರ ಪ್ರದೇಶಗಳಲ್ಲಿ ಜನರ ತೆರವು

ಚೆನ್ನೈ: ಭಾರತದ ಪೂರ್ವ ಕರಾವಳಿ ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಅಸಾನಿ ಚಂಡಮಾರುತದಿಂದ ಭಾರಿ ಮಳೆ ಬೀಳಬಹುದು ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.

ಒಡಿಶಾ ಮತ್ತು ಆಂಧ್ರ ಪ್ರದೇಶದ ಕರಾವಳಿಯತ್ತ ಧಾವಿಸಿ ಬಂದ ಚಂಡಮಾರುತ ನಿಧಾನವಾಗಿ ವೇಗ ಕಳೆದುಕೊಂಡಿದೆ

ತೀರ ಪ್ರದೇಶದಲ್ಲಿ ಬಿರುಗಾಳಿ ಬೀಸದಿದ್ದರೂ ವ್ಯಾಪಕವಾಗಿ ಮಳೆ ಸುರಿಯಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತದಿಂದ ಹಾನಿಯಾಗುವ ಸಾಧ್ಯತೆಯಿರುವ ನಾಲ್ಕು ಕರಾವಳಿ ಜಿಲ್ಲೆಗಳಿಂದ ಜನರನ್ನು ಸ್ಥಳಾಂತರಿಸಲು ಒಡಿಶಾ ಸರ್ಕಾರ ಮುಂದಾಗಿದೆ. ರಾಜ್ಯದ ಯಾವುದೇ ಬಂದರು ಸಮೀಪಕ್ಕೆ ಹಡಗುಗಳು ಬರಬಾರದು ಎಂದು ಸರ್ಕಾರ ಸೂಚನೆ ನೀಡಿದೆ.

ಆಂಧ್ರ ಪ್ರದೇಶ, ತೆಲಂಗಾಣ, ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್​ ರಾಜ್ಯಗಳಲ್ಲಿಯೂ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಚಂಡಮಾರುತ ಪ್ರಭಾವದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೈದರಾಬಾದ್​ನ ಹವಾಮಾನ ಮುನ್ಸೂಚನಾ ಕೇಂದ್ರ ಎಚ್ಚರಿಸಿದೆ.

ಈ ಮೊದಲು ಚಂಡಮಾರುತವು ಒಡಿಶಾ ಅಥವಾ ಆಂಧ್ರ ಪ್ರದೇಶದ ಕಡಲ ತೀರದಲ್ಲಿ ನೆಲಕ್ಕೆ ಅಪ್ಪಳಿಸಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಮಂಗಳವಾರ ನಸುಕಿನ ನಂತರ ಚಂಡಮಾರುತವು ಪೂರ್ವ ತೀರಕ್ಕೆ ಸಮಾನಾಂತರವಾಗಿ ಸಂಚರಿಸಿ ಭಾರೀ ಮಳೆಗೆ ಕಾರಣವಾಗಬಹುದು ಎಂದು ಹವಾಮಾನ ಇಲಾಖೆಯ ಪ್ರಧಾನ ನಿರ್ದೇಶಕ ಮೃತ್ಯುಂಜಯ ಮಹಾಪಾತ್ರ ತಿಳಿಸಿದರು. ಈ ನಡುವೆ ಚೆನ್ನೈಗೆ ಬರುತ್ತಿದ್ದ 10 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ವಿಮಾನ ನಿಲ್ದಾಣ ಅಧಿಕಾರಿಗಳು ತಿಳಿಸಿದ್ದಾರೆ.

ಹೈದರಾಬಾದ್, ವಿಶಾಖಪಟ್ಟಣ, ಜೈಪುರ ಮತ್ತು ಮುಂಬೈ ನಗರಗಳಿಂದ ಈ ವಿಮಾನಗಳು ಚೆನ್ನೈಗೆ ಬರಬೇಕಿತ್ತು. ವಿಮಾನಗಳು ರದ್ದುಪಡಿಸಿರುವ ಕುರಿತು ಪ್ರಯಾಣಿಕರಿಗೆ ಮಾಹಿತಿ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

5 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

5 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

5 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

6 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

7 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

7 hours ago