News Karnataka Kannada
Thursday, May 02 2024
ತಮಿಳುನಾಡು

ಚೆನ್ನೈ: ಅನಿರೀಕ್ಷಿತ ಧಾರಾಕಾರ ಮಳೆ, ಶಾಲಾ, ಕಾಲೇಜು ಬಂದ್

Rain 18072021
Photo Credit :

ಚೆನ್ನೈ: ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದ ಪರಿಣಾಮ ಚೆನ್ನೈನಲ್ಲಿ ಒಂದೇ ದಿನದಲ್ಲಿ ಬರೋಬ್ಬರಿ 20 ಸೆಂ.ಮೀ ಮಳೆಯಾಗಿದ್ದು,ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದರಿಂದ ಕೇವಲ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ನಾಲ್ಕು ಜಿಲ್ಲೆಗಳಲ್ಲಿನ ಶಾಲಾ, ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಚೆನ್ನೈ, ತಿರುವಳ್ಳೂರ್, ಕಾಂಚಿಪುರಂ ಹಾಗೂ ಚೆಂಗಲ್ ಪಟ್ಟುವಿನಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳನ್ನು ಬಂದ್ ಮಾಡಲಾಗಿದೆ ಎಂದು ವರದಿ ತಿಳಿಸಿದೆ.ನದಿಪಾತ್ರಗಳ ಸಮೀಪ ಇವರು ಜನರಿಗೆ ಮುನ್ಸೂಚನೆ ನೀಡಲಾಗಿದ್ದು, ಅವರನ್ನು ಸ್ಥಳಾಂತರಿಸುವ ಕೆಲಸ ನಡೆಯುತ್ತಿದೆ.

ಭಾರೀ ಮಳೆಯಿಂದಾಗಿ ವಿದ್ಯುತ್ ಶಾಕ್ ತಗುಲಿ ಮೂವರು ಸಾವನ್ನಪ್ಪಿದ್ದಾರೆ. ಧಾರಾಕಾರ ಮಳೆಯಿಂದಾಗಿ ರಸ್ತೆಗಳು, ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ ಎಂದು ವರದಿ ತಿಳಿಸಿದೆ.

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಪ್ರವಾಹ ನಿಯಂತ್ರಣ ಕಚೇರಿಗೆ ಭೇಟಿ ನೀಡಿದ್ದು, ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸೂಚನೆ ನೀಡಿರುವುದಾಗಿ ವರದಿ ಹೇಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು