News Karnataka Kannada
Monday, April 29 2024
ತಮಿಳುನಾಡು

ಚೆನ್ನೈ: ಶಿಕ್ಷಕರಿಬ್ಬರ ಮೇಲೆ ಲೈಂಗಿಕ ದೌರ್ಜನ್ಯದ ದೂರು ನೀಡಿದ ವಿದ್ಯಾರ್ಥಿನಿಯರು

Rape
Photo Credit :

ಚೆನ್ನೈ : ಗುರು ಸ್ಥಾನದಲ್ಲಿದ್ದವರೇ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ಅಮಾನವೀಯ ಘಟನೆಗಳು ಇತ್ತೀಚೆಗೆ ಹೆಚ್ಚಾಗಿ ಕೇಳಿ ಬರುತ್ತಿದ್ದು, ಸಮಾಜ ತಲೆ ತಗ್ಗಿಸುವಂತಾಗುತ್ತಿದೆ.

ಶಾಲೆಯೊಂದರ ಗಣಿತ ಹಾಗೂ ಸಮಾಜ ವಿಜ್ಞಾನ ಶಿಕ್ಷಕರಿಬ್ಬರ ಮೇಲೆ ಲೈಂಗಿಕ ದೌರ್ಜನ್ಯದ ದೂರು ಕೇಳಿ ಬಂದಿದ್ದು, ಪೊಲೀಸರು ಓರ್ವನನ್ನು ಬಂಧಿಸಿ ಮತ್ತೊಬ್ಬನಿಗಾಗಿ ಬಲೆ ಬೀಸಿದ್ದಾರೆ.

ಈ ಘಟನೆ ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಶಾಲೆಯಲ್ಲಿ ಮಕ್ಕಳ ರಕ್ಷಣೆ ಕುರಿತ ಕಾರ್ಯಕ್ರಮ ನಡೆಸಿದ ಮೇಲೆ ಶಿಕ್ಷಕರಿಬ್ಬರ ವಿರುದ್ಧ 15 ವಿದ್ಯಾರ್ಥಿನಿಯರು ಲೈಂಗಿಕ ದೌರ್ಜನ್ಯದ ದೂರು ನೀಡಿದ್ದಾರೆ.

ಈ ಶಿಕ್ಷಕರು ಶಾಲಾ ಅವಧಿಯ ನಂತರವೂ ವಿದ್ಯಾರ್ಥಿನಿಯರಿಗೆ ಕರೆ ಮಾಡುವುದು. ಮುಟ್ಟುವುದು, ಅನುಚಿತವಾದಂತಹ ಮಾತುಗಳನ್ನು ಹೇಳುತ್ತಿದ್ದರು ಎಂದು 9 ಹಾಗೂ 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

ವಿದ್ಯಾರ್ಥಿನಿಯರ ದೂರಿನ ಹಿನ್ನೆಲೆಯಲ್ಲಿ ಈ ಪ್ರಕರಣದ ತನಿಖೆಯನ್ನು ಪೊಲೀಸರು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹಾಗೂ ಜಿಲ್ಲಾ ಶಿಕ್ಷಣಾಧಿಕಾರಿ ತನಿಖೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು