News Karnataka Kannada
Monday, May 06 2024
ತಮಿಳುನಾಡು

ತಮಿಳುನಾಡಿನಲ್ಲಿ ಆಗಸ್ಟ್ 9ರವರೆಗೆ ಲಾಕ್‌ಡೌನ್‌ ವಿಸ್ತರಣೆ

Lockdown 31072021
Photo Credit :

ಚೆನ್ನೈ: ಕೋವಿಡ್‌-19 ಪ್ರಕರಣಗಳು ಏರಿಕೆಯಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ತಮಿಳುನಾಡು ಸರ್ಕಾರವು ರಾಜ್ಯದಲ್ಲಿ ಆಗಸ್ಟ್ 9ರವರೆಗೆ ಲಾಕ್‌ಡೌನ್‌ ಮುಂದುವರಿಸಿದೆ.

ಕಳೆದ ತಿಂಗಳು ತಮಿಳುನಾಡಿನ 31 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿಗೆ ಇಳಿದಿತ್ತು. ಆದರೆ, ಕಳೆದ ಮೂರು ದಿನಗಳಿಂದ ಈ ಸಂಖ್ಯೆಯು ಏಕಾಏಕಿ ಏರಿಕೆಯಾಗಿದೆ. ಶುಕ್ರವಾರ 1,947 ಹೊಸ ಪ್ರಕರಣಗಳು ವರದಿಯಾಗಿವೆ. ಬುಧವಾರ ಮತ್ತು ಗುರುವಾರ ಕ್ರಮವಾಗಿ 1,756 ಹಾಗೂ 1,859 ಹೊಸ ಪ್ರಕರಣಗಳು ವರದಿಯಾಗಿದ್ದವು.

ರಾಜ್ಯದಲ್ಲಿ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಹೆಚ್ಚಿನ ಜನರು ಮಾಸ್ಕ್‌ಗಳನ್ನು ಧರಿಸುತ್ತಿಲ್ಲ. ಕೋವಿಡ್‌ ಮಾರ್ಗಸೂಚಿಯನ್ನು ಸರಿಯಾಗಿ ಪಾಲಿಸುತ್ತಿಲ್ಲ ಎಂದು ತಮಿಳುನಾಡು ಆರೋಗ್ಯ ಸಚಿವ ಎಂ.ಎ. ಸುಬ್ರಮಣಿಯನ್ ಬೇಸರ ವ್ಯಕ್ತಪಡಿಸಿದ್ದಾರೆ.

ತಮಿಳುನಾಡಿನಲ್ಲಿ ಇದುವರೆಗೆ 25,00,434 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಸಾವಿನ ಸಂಖ್ಯೆ 34,023ಕ್ಕೆ ತಲುಪಿದೆ. ಸದ್ಯ 21,207 ಸಕ್ರಿಯ ಪ್ರಕರಣಗಳಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 5 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು