ತಮಿಳುನಾಡಿನಲ್ಲಿ ನಿಲ್ಲದ ವರುಣನ ಆರ್ಭಟ: 16 ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ ಘೋಷಣೆ

ತಮಿಳುನಾಡಿನಲ್ಲಿ ಕಳೆದ ಹಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಪ್ರವಾಹದ ಭೀತಿ ಎದುರಾಗಿದೆ. ಇದರ ಜೊತೆಗೆ ಇನ್ನೂ 2-3 ದಿನಗಳ ಕಾಲ ತಮಿಳುನಾಡಿನಲ್ಲಿ ಭಾರೀ ಮಳೆಯಾಗುವುದರಿಂದ ಚೆನ್ನೈ ಸೇರಿದಂತೆ 16 ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ ಘೋಷಿಸಲಾಗಿದೆ.

ಅಕ್ಟೋಬರ್ 1ರಿಂದ ಇಲ್ಲಿಯವರೆಗೆ ಸುರಿಯುತ್ತಿರುವ ಈಶಾನ್ಯ ಮುಂಗಾರಿನಿಂದ ತಮಿಳುನಾಡು ಶೇ. 61ರಷ್ಟು ಹೆಚ್ಚುವರಿ ಮಳೆಯನ್ನು ಪಡೆದಿದೆ. ನಾಳೆ ಕೂಡ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ರಾಣಿಪೇಟ್, ದಿಂಡುಗಲ್, ಪುದುಕೊಟ್ಟೈ, ತೇಣಿ, ವೆಲ್ಲೂರು, ಅರಿಯಲ್ಲೂರು, ನಾಗಪಟ್ಟಣಂ, ವಿಲ್ಲುಪುರ, ತಿರುವಾರೂರ್, ಮೈಲಾಡುಧುರೈ, ಕಲ್ಲಕುರಿಚಿ, ಕಡಲೂರು, ವಿಲ್ಲಿಪುರಂ, ತಂಜಾವೂರು ಮತ್ತು ಧರ್ಮಪುರಿಯಲ್ಲಿ ಶಾಲಾ ಕಾಲೇಜುಗಳು ಮುಚ್ಚಲಿವೆ.

ನವೆಂಬರ್ 19ರಂದು ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಉತ್ತರ ತಮಿಳುನಾಡು ಕರಾವಳಿಯ ನೈಋತ್ಯ ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತವು ಪಶ್ಚಿಮ-ವಾಯುವ್ಯದ ಕಡೆಗೆ ಚಲಿಸಿದೆ. ಭಾರತೀಯ ಹವಾಮಾನ ಇಲಾಖೆಯು ಚೆನ್ನೈ ಮತ್ತು ಇತರ 15 ಜಿಲ್ಲೆಗಳಿಗೆ ಇಂದು ರೆಡ್ ಅಲರ್ಟ್ ಘೋಷಿಸಿದೆ. ಚೆನ್ನೈ ಜಿಲ್ಲಾಧಿಕಾರಿಗಳು ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದೆ.

ಕಡಲೂರು, ವಿಲ್ಲುಪುರಂ, ಚೆಂಗಲ್ಪಟ್ಟು, ಕಾಂಚೀಪುರಂ, ಚೆನ್ನೈ ಮತ್ತು ತಿರುವಳ್ಳೂರು ಸೇರಿದಂತೆ 16 ಜಿಲ್ಲೆಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ರೆಡ್ ಅಲರ್ಟ್​ ನೀಡಲಾಗಿದೆ. ಪೆರಂಬಲೂರು, ಅರಿಯಲೂರು, ಧರ್ಮಪುರಿ, ತಿರುಪತ್ತೂರು, ವೆಲ್ಲೂರು ಮತ್ತು ರಾಣಿಪೇಟ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಚೆನ್ನೈ, ತಾಂಬರಂ, ಮೈಲಾಪುರ್, ವೆಲಾಚೇರಿ, ಅಂಬತ್ತೂರು, ಸೈದಾಪೇಟ್, ಕ್ರೋಮ್‌ಪೇಟ್, ರಾಯಪೆಟ್ಟಾ, ಪ್ಯಾರಿಸ್, ಏಕಾತುತಂಗಲ್, ಕೊಟ್ಟೂರ್‌ಪುರಂ, ಅಡ್ಯಾರ್ ಮರೀನಾದಲ್ಲಿ ಭಾರೀ ಮಳೆಯಾಗುತ್ತಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಚೆನ್ನೈನಲ್ಲಿ ಎರಡು ಮತ್ತು ಚೆಂಗಲ್‌ಪೇಟ್, ತಿರುವಳ್ಳೂರು ಮತ್ತು ಕಾಂಚೀಪುರಂನಲ್ಲಿ ತಲಾ ಒಂದು ತಂಡಗಳನ್ನು ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕಾಗಿ ನಿಯೋಜಿಸಿದೆ

Sneha Gowda

Recent Posts

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

17 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

38 mins ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

44 mins ago

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

1 hour ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

1 hour ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

1 hour ago