ತಮಿಳುನಾಡಿನಲ್ಲಿ ಭಾನುವಾರ ಸಂಪೂರ್ಣ ಲಾಕ್‌ಡೌನ್ ಘೋಷಣೆ

ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಭಾನುವಾರ ಸಂಪೂರ್ಣ ಲಾಕ್‌ಡೌನ್ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಸ್ಟಾಲಿನ್ ತಿಳಿಸಿದ್ದಾರೆ.

ಈ ವೇಳೆ ಆಟೋಗಳು ಮತ್ತು ಟ್ಯಾಕ್ಸಿಗಳಲ್ಲಿ ವಿಮಾನ ನಿಲ್ದಾಣ, ಬಸ್ ಮತ್ತು ರೈಲು ನಿಲ್ದಾಣಗಳಿಗೆ ಹೋಗಲು ಅನುಮತಿ ಇದೆ.
ತಮಿಳುನಾಡಿನಲ್ಲಿ ಉಳಿದ ಎಲ್ಲಾ ದಿನಗಳಲ್ಲಿ ರಾತ್ರಿ 10ರಿಂದ ಬೆಳಿಗ್ಗೆ 5ರವರೆಗೆ ನೈಟ್ ಕರ್ಫ್ಯೂ ಇರಲಿದೆ.

ಕೊರೋನಾ ಉಲ್ಬಣದ ಹಿನ್ನೆಲೆ ಸರ್ಕಾರವು ಭಾನುವಾರ ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ವಿಧಿಸಿದೆ. ಲಾಕ್‌ಡೌನ್ ಶನಿವಾರ ರಾತ್ರಿ 10 ಗಂಟೆಗೆ ಪ್ರಾರಂಭವಾಗುತ್ತದೆ. ಸೋಮವಾರ ಬೆಳಿಗ್ಗೆ 5ರವರೆಗೆ ಲಾಕ್​ಡೌನ್ ಜಾರಿಯಲ್ಲಿರುತ್ತದೆ.

ಹಾಲಿನ ಅಂಗಡಿಗಳು, ಎಟಿಎಂ ಕೇಂದ್ರಗಳು, ಆಸ್ಪತ್ರೆಗಳು, ಆಸ್ಪತ್ರೆಗೆ ಸಂಬಂಧಿಸಿದ ಕೆಲಸಗಳು, ಸರಕು ಸಾಗಣೆ ಮತ್ತು ಪೆಟ್ರೋಲ್ ಬಂಕ್‌ಗಳನ್ನು ಒಳಗೊಂಡಿರುವ ಕಾರ್ಯಾಚರಣೆಯ ಅಗತ್ಯ ಸೇವೆಗಳನ್ನು ಅನುಮತಿಸಲಾಗಿದೆ.

ರೆಸ್ಟೋರೆಂಟ್‌ಗಳು ಮತ್ತು ಹೋಟೆಲ್‌ಗಳು ಬೆಳಿಗ್ಗೆ 7 ರಿಂದ ರಾತ್ರಿ 10ರವರೆಗೆ ಪಾರ್ಸಲ್ ಸೇವೆಗಳನ್ನು ನೀಡಬಹುದು.

Sneha Gowda

Recent Posts

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

9 mins ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

27 mins ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

48 mins ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

1 hour ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

1 hour ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

2 hours ago