ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಳೆಗೆ ಮನೆ ಬಿದ್ದು ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ವೆಲ್ಲೂರಿನಲ್ಲಿ ಕೆಲವು ದಿನಗಳಿಂದ ಭಾರೀ ಮಳೆಯಾಗಿತ್ತು. ನಿನ್ನೆ ಸುರಿದ ಮಳೆಗೆ ಮನೆಯ ಗೋಡೆ ಕುಸಿದಿದ್ದು, ನಾಲ್ಕು ಮಕ್ಕಳು ಸೇರಿ ಒಂಬತ್ತು ಮಂದಿ ಮೃತಪಟ್ಟಿದ್ದಾರೆ.
ಮೃತರ ಕುಟುಂಬಕ್ಕೆ ಸಿಎಂ ಎಂ.ಕೆ. ಸ್ಟಾಲಿನ್ ಐದು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಉತ್ತರ ತಮಿಳುನಾಡು ಕರಾವಳಿಯ ನೈಋತ್ಯ ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತವು ಪಶ್ಚಿಮ-ವಾಯುವ್ಯದ ಕಡೆ ಚಲಿಸುತ್ತಿದ್ದು, ಇನ್ನೂ ಎರಡು ದಿನ ಮಳೆ ಸಾಧ್ಯತೆ ಇದೆ.