News Karnataka Kannada
Wednesday, May 01 2024
ತಮಿಳುನಾಡು

ತಮಿಳುನಾಡಿನಲ್ಲಿ ಮುಂದುವರಿಯುತ್ತಿರುವ ಭಾರೀ ಮಳೆ: ರೆಡ್ ಅಲರ್ಟ್; 27 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ

Heavy rains disrupt normal life in Hubballi
Photo Credit :

ಚೆನ್ನೈ: ತಮಿಳುನಾಡಿನಲ್ಲಿ  ಮುಂದುವರಿಯುತ್ತಿರುವ ಭಾರಿ ಮಳೆ ರಾಜ್ಯದ ಐದು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

ತಮಿಳುನಾಡಿನ ತಿರುನೆಲ್ವೇಲಿ, ತೂತುಕುಡಿ, ರಾಮನಾಥಪುರಂ, ಪುದುಕೊಟ್ಟೈ ಮತ್ತು ನಾಗಪಟ್ಟಣಂ ಜಿಲ್ಲೆಗಳಲ್ಲಿ ಅತಿಹೆಚ್ಚು ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

27 ಜಿಲ್ಲೆಗಳಲ್ಲಿ ಸುರಿದ ಧಾರಾಕಾರ ಮಳೆಯಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ರಾಜ್ಯದಲ್ಲಿ ಸುರಿದ ನಿರಂತರ ಮಳೆಯಿಂದಾಗಿ ಸಾಕಷ್ಟು ಪ್ರಮಾಣದ ಬೆಳೆ ಹಾನಿಯಾಗಿದೆ. ಹಲವು ಪ್ರದೇಶಗಳಲ್ಲಿ ಕಟ್ಟಡಗಳು ಮುಳುಗಡೆಯಾಗಿದ್ದರೆ, ರಸ್ತೆಗಳು ಜಲಾವೃತಗೊಂಡಿದ್ದು, ಪ್ರವಾಹ ಪರಿಸ್ಥಿತಿಯನ್ನು ಸೃಷ್ಟಿಸಿವೆ.

ತಮಿಳುನಾಡಿನಲ್ಲಿ ಕಳೆದ ತಿಂಗಳಿನಿಂದ ಸುರಿಯುತ್ತಿರುವ ಸತತ ಮಳೆಯ ಹಿನ್ನೆಲೆಯಲ್ಲಿ ತೂತುಕುಡಿ, ಕನ್ಯಾಕುಮಾರಿ, ತಿರುನಲ್ವೇಲಿ, ಕಡಲೂರು, ತಿರುವರೂರು, ತೆಂಕಶಿ ಮತ್ತು ವಿಲ್ಲುಪುರಂ ಸೇರಿದಂತೆ 27 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಶಿಕ್ಷಣ ಸಂಸ್ಥೆಗಳಿಗೂ ರಜೆ ಘೋಷಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು