ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿನ ಹೊಸ ರೂಪಾಂತರಿ ಒಮಿಕ್ರಾನ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ತಮಿಳುನಾಡಿನಲ್ಲಿ ಮೊದಲ ಒಮಿಕ್ರಾನ್ ಪ್ರಕರಣ ಪತ್ತೆಯಾಗಿದೆ.
ನೈಜೀರಿಯಾದಿಂದ ಬಂದಿದ್ದ ವ್ಯಕ್ತಿಯಲ್ಲಿ ಕೊವಿಡ್ 19 ಸೋಂಕು ಕಾಣಿಸಿಕೊಂಡು, ಅದನ್ನು ಜಿನೋಮ್ ಸಿಕ್ವೆನ್ಸಿಂಗ್ ತಪಾಸಣೆಗೆ ಕಳಿಸಿದಾಗ ಅವರಲ್ಲಿ ಒಮಿಕ್ರಾನ್ ಇರುವುದು ದೃಢಪಟ್ಟಿದೆ.