News Karnataka Kannada
Friday, May 03 2024
ತಮಿಳುನಾಡು

ತಮಿಳುನಾಡು: ಹದಿನೆಂಟು ವರ್ಷ ಮೇಲ್ಪಟ್ಟ ಎಲ್ಲ ವಿದ್ಯಾರ್ಥಿಗಳಿಗೆ ಲಸಿಕೆ ಕಡ್ಡಾಯ

Vaccine 17072021
Photo Credit :

ಚೆನ್ನೈ : ಕರ್ನಾಟಕದಲ್ಲಿ ಮಕ್ಕಳು ಶಾಲೆಗೆ ಬರಬೇಕಿದ್ದರೆ ಅವರ ಪಾಲಕರು ಎರಡೂ ಡೋಸ್ ಲಸಿಕೆ ತೆಗೆದುಕೊಂಡಿರಬೇಕು ಎಂಬ ಸೂಚನೆ ನೀಡಲಾಗಿದೆ. ಅತ್ತ ತಮಿಳುನಾಡಿನಲ್ಲಿ ವಿದ್ಯಾರ್ಥಿಗಳಿಗೇ ಲಸಿಕೆ ಕಡ್ಡಾಯ ಮಾಡಲಾಗಿದೆ.

ಹದಿನೆಂಟು ವರ್ಷ ಮೇಲ್ಪಟ್ಟ ಎಲ್ಲ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಬೇಕಿದ್ದರೆ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಂಡಿರಬೇಕು ಎಂದು ಆರೋಗ್ಯ ಇಲಾಖೆ ಮೂಲಕ ಆದೇಶ ಹೊರಡಿಸಲಾಗಿದೆ ಎಂದು ಅಲ್ಲಿನ ಆರೋಗ್ಯ ಮಂತ್ರಿ ಸುಬ್ರಮಣಿಯನ್​ ತಿಳಿಸಿದ್ದಾರೆ.

ಆರೋಗ್ಯ ಹಾಗೂ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳ ಮಟ್ಟದಲ್ಲಿ ನಡೆದ ಸಭೆಯಲ್ಲಿ ಇಂಥದ್ದೊಂದು ನಿರ್ಧಾರ ಕೈಗೊಂಡು, ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಆದೇಶ ಹೊರಡಿಸಲಾಗಿದೆ. ಆ ಪ್ರಕಾರ ತರಗತಿಗೆ ಬರುವ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ಕಡೇಪಕ್ಷ ಒಂದು ಡೋಸ್ ಲಸಿಕೆ ಹಾಕಿಸಿಕೊಳ್ಳಬೇಕಾದ್ದು ಕಡ್ಡಾಯ ಎಂದು ಅವರು ಹೇಳಿದ್ದಾರೆ.

18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಲ್ಲಿ ಶೇ. 46 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೊದಲ ಡೋಸ್ ಲಸಿಕೆ ಪಡೆದಿದ್ದು, ಶೇ. 12 ವಿದ್ಯಾರ್ಥಿಗಳು ಮಾತ್ರ ಎರಡು ಡೋಸ್ ಲಸಿಕೆ ಪಡೆದಿದ್ದಾರೆ ಎಂದಿರುವ ಸಚಿವರು, ನೂರಕ್ಕೆ ನೂರರಷ್ಟು ವಿದ್ಯಾರ್ಥಿಗಳು ಎರಡೂ ಡೋಸ್ ಲಸಿಕೆ ಹಾಕಿಸಿಕೊಳ್ಳುವಂತೆ ಮಾಡುವುದು ನಮ್ಮ ಗುರಿ ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು