ಲೋಕ ಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ರಾಹುಲ್ ಗಾಂಧಿ ತಮ್ಮ ಭಾಷಣದ ಉದ್ದಕ್ಕೂ ತಮಿಳುನಾಡಿನ ವಿಚಾರ ಮಾತನಾಡಿದ್ದಾರೆ.
ಈ ಕುರಿತು ಸುದ್ಧಿಗಾರರು ಕೇಳಿದಾಗ ಮೈ ತಮಿಳು ಹೂಂ ನಾ (ನಾನು ತಮಿಳಿಗ) ಎಂದು ಹೇಳಿದ್ದರು. ಇದೀಗ ಈ ಹೇಳಿಕೆಗೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ತಿರುಗೇಟು ನೀಡಿದ್ದಾರೆ.
ತಮಿಳುನಾಡಿನಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ ಎಂದು ರಾಹುಲ್ ಗಾಂಧಿ ಮಾತನಾಡಿದ್ದಾರೆ. ಆದರೆ ‘ತಮಿಳುನಾಡಿನಲ್ಲಿ ಬರುವ ದಿನಗಳಲ್ಲಿ ಏನಾಗುತ್ತದೆ ಎಂಬುದನ್ನ ಕಾದು ನೋಡಿ, ತಮಿಳುನಾಡಿನ ಮಣ್ಣಿನ ಮಗನಾದ ರಾಹುಲ್ ಗಾಂಧಿ’ ಎಂದು ಟ್ವೀಟ್ ನಲ್ಲಿ ತಿರುಗೇಟು ನೀಡಿದ್ದಾರೆ.
ಬುಧವಾರ ಲೋಕಸಭೆಯಲ್ಲಿ ರಾಹುಲ್ ಗಾಂಧಿ , ಯಾವುದೇ ಕಾಲಕ್ಕೂ ತಮಿಳುನಾಡಿನಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಹೇಳಿದ್ದರು.