ನೀಟ್ ಪರೀಕ್ಷೆ ಫಲಿತಾಂಶದ ಆತಂಕ: ವಿದ್ಯಾರ್ಥಿನಿ ಆತ್ಮಹತ್ಯೆ

ಚೆನ್ನೈ: ಅರಿಯಲುರ್ ಜಿಲ್ಲೆಯ ಸತಂಪಡಿ ಗ್ರಾಮದ 19 ವರ್ಷದ ವಿದ್ಯಾರ್ಥಿನಿ ಕೆ.ಕನ್ನಿಮೋಳಿ ಅತ್ಮಹತ್ಯೆ ಮಾಡಿಕೊಂಡಾಕೆ. ಆಕೆ ಇತ್ತೀಚಿಗಷ್ಟೆ ನೀಟ್ ಪ್ರವೇಶ ಪರೀಕ್ಷೆ ಬರೆದಿದ್ದಳು. ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಿಂದ ಆಕೆ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಲಕಿಯ ಪೋಷಕರಿಬ್ಬರೂ ವಕೀಲರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಕನ್ನಿಮೋಳಿ ಬೇಸರದಿಂದಿದ್ದಳು ಎನ್ನಲಾಗಿದೆ. ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಕಠಿಣವಾಗಿತ್ತು ಎಂದು ಆಕೆ ಪೋಷಕರಲ್ಲಿ ಹೇಳಿಕೊಂಡಿದ್ದಳು. ಹಾಗಾಗಿ ತಾನು ಪರೀಕ್ಷೆ ಪಾಸಾಗುವುದಿಲ್ಲ ಎಂದು ಆಕೆ ಹೇಳಿದ್ದಳು. ಪೋಷಕರು ಆಕೆಗೆ ಸಮಾಧಾನ ಹೇಳಿದ್ದರೂ ಆಕೆ ಬೇಸರದಿಂದ ಹೊರ ಬಂದಿರಲಿಲ್ಲ. ಪೋಷಕರು ಕಾರ್ಯಕ್ರಮ ನಿಮಿತ್ತ ಪಕ್ಕದ ಊರಿಗೆ ಹೋಗಿದ್ದ ಸಮಯದಲ್ಲಿ ಕನ್ನಿಮೋಳಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಕನ್ನಿಮೋಳಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 562 ಅಂಕಗಳನ್ನು ಪಡೆದಿದ್ದಳು. ಇತ್ತೀಚಿಗಷ್ಟೆ ಧನುಷ್ ಎಂಬ ನೀಟ್ ಪರೀಕ್ಷೆ ಬರೆದಿದ್ದ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದ. ಸರ್ಕಾರ ನೀಟ್ ಪರೀಕ್ಷೆ ರದ್ದು ಪಡಿಸುವ ವಿಚಾರವಾಗಿ ಕೆಲವು ಸಮಯದಿಂದ ಹೇಳಿಕೆಗಳನ್ನು ನೀಡಿತ್ತು. ನೀಟ್ ಪರೀಕ್ಷೆ ರದ್ದಾಗುವುದೆಂದು ಹಲವು ಮಂದಿ ವಿದ್ಯಾರ್ಥಿಗಳು ಚೆನ್ನಾಗಿ ತಯಾರಾಗಿರಲಿಲ್ಲ. ಸರ್ಕಾರದ ಗೊಂದಲಮಯ ಹೇಳಿಕೆಯಿಂದ ವಿದ್ಯಾರ್ಥಿಗಳು ಒತ್ತಡಕ್ಕೀಡಾಗಿದ್ದಾರೆ ಎಂದು ಪ್ರತಿಪಕ್ಷ ಆರೋಪಿಸಿತ್ತು.

Sampriya YK

Recent Posts

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

14 mins ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

34 mins ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

55 mins ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

1 hour ago

ಡ್ರಾಪ್​ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್​ ಕೊಡುವ ನೆಪದಲ್ಲಿ  ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…

1 hour ago

ಇಬ್ರಾಹಿಂ ರೈಸಿ ನಿಧನ: ನಾಳೆ ಭಾರತದಲ್ಲಿ ಒಂದು ದಿನದ ‘ಶೋಕಾಚರಣೆ’

ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…

1 hour ago