ಪ್ರಧಾನಿ ನರೇಂದ್ರ ಮೋದಿ ತಮಿಳುನಾಡು ಭೇಟಿ ರದ್ದು

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರ ತಮಿಳುನಾಡು ರಾಜ್ಯ ಪ್ರವಾಸ ಕಾರ್ಯಕ್ರಮ ಮುಂದೂಡಲಾಗಿದೆ.ರಾಜ್ಯದಲ್ಲಿ ಕೋವಿಡ್‌ ಲಾಕ್‌ಡೌನ್ ನಿಬಂಧನೆಗಳು ಜಾರಿಯಲ್ಲಿರುವುದರಿಂದ ಸಭೆ, ಸಮಾರಂಭಗಳನ್ನು ನಿಷೇಧಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ಭೇಟಿಯನ್ನು ರದ್ದುಗೊಳಿಸಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಅಣ್ಣಾಮಲೈ ಪ್ರಕಟಿಸಿದ್ದಾರೆ.

ಇದೇ ತಿಂಗಳ 12ರಂದು ಮಧುರೈ ಸೇರಿದಂತೆ ವಿರುದುನಗರ, ಪುದುಚೇರಿಗೆ ಪ್ರಧಾನಿ ಭೇಟಿ ನೀಡಬೇಕಿತ್ತು.ಕೊರೊನಾ, ಒಮಿಕ್ರಾನ್‌ ರೂಪಾಂತರಿಯ ತೀವ್ರತೆ, ಸಾರ್ವಜನಿಕ ಆರೋಗ್ಯದ ಹಿತ ದೃಷ್ಟಿಯಿಂದ ಪ್ರಧಾನಿ ಮೋದಿ ಕಾರ್ಯಕ್ರಮವನ್ನು ಮುಂದೂಡಿದ್ದೇವೆ ಎಂದು ಅಣ್ಣಾಮಲೈ ಹೇಳಿದ್ದಾರೆ. ಈ ತಿಂಗಳ 12ರಂದು ‘ಮೋದಿ ಪೊಂಗಲ್’ ಹೆಸರಿನಲ್ಲಿ ಮದುರೈನಲ್ಲಿ ಬೃಹತ್‌ ಪೊಂಗಲ್ ಕಾರ್ಯಕ್ರಮ ನಡೆಸಲು ರಾಜ್ಯ ಬಿಜೆಪಿ ಸಜ್ಜುಗೊಂಡಿತ್ತು.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಕೇಂದ್ರ ಸಚಿವರು, ಬಿಜೆಪಿ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಯೋಜನೆ ರೂಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಧಾನಿ ಕಾರ್ಯಕ್ರಮ ರದ್ದುಗೊಳಿಸಲಾಗಿದೆ.

Swathi MG

Recent Posts

ಉಡುಪಿ: ಇಂದಿನಿಂದ ಮೂರು ದಿನಗಳ ಕರಾವಳಿ ಕಲಾವಿದೆರ್ ತುಳು ನಾಟಕೋತ್ಸವ

ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…

4 mins ago

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ 5 ಭಾರತೀಯ ನಾವಿಕರ ಬಿಡುಗಡೆ

ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.

19 mins ago

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ 99 ಬ್ಯಾಚ್ ನ 25ನೇ ವರ್ಷಾಚರಣೆ

ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ತನ್ನ ಮೊದಲ ಎಂ.ಬಿ.ಬಿ. ಎಸ್. ಬ್ಯಾಚ್ 99 ರ ಗುರುವಂದನ ಮತ್ತು 25ನೇ…

30 mins ago

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

45 mins ago

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

1 hour ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

2 hours ago