News Karnataka Kannada
Monday, May 06 2024
ತಮಿಳುನಾಡು

ಭೀಕರ ಕಾರು ಅಪಘಾತ 22 ವರ್ಷದ ಯುವಕ ದುರಂತ ಸಾವು

Accident
Photo Credit :

ಚೆನ್ನೈ: ಡಿಎಂಕೆ ಪಕ್ಷದ ರಾಜ್ಯಸಭಾ ಸದಸ್ಯ ಎನ್​​.ಆರ್​. ಇಳಂಗೋವನ್ ಅವರ ಪುತ್ರ ರಾಕೇಶ್​ (22) ಗುರುವಾರ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ.

ಸಂಸದರ ಪುತ್ರ ಪುದುಚೇರಿಯಿಂದ ಚೆನ್ನೈಗೆ ಹೆಚ್ಚು ಪ್ರಯಾಣಿಕರೊಂದಿಗೆ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು.ನಿಯಂತ್ರಣ ತಪ್ಪಿದ ಕಾರು ರಸ್ತೆಯ ಡಿವೈಡರ್​ಗೆ ಡಿಕ್ಕಿ ಹೊಡೆದು ಅಪಘಾತದ ಸಂಭವಿಸಿದೆ. ರಾಕೇಶ್​ ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬ ಪ್ರಯಾಣಿಕ ಗಂಭೀರವಾರ ಗಾಯಗೊಂಡಿದ್ದಾರೆ.

ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ರಾಕೇಶ್​ ಮೃತದೇಹವನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಇನ್ನು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

ಮಾಜಿ ಹಿರಿಯ ವಕೀಲರಾದ ಎನ್‌ಆರ್ ಇಳಂಗೋವನ್ ಅವರು 2020 ರಲ್ಲಿ ತಮಿಳುನಾಡಿನಿಂದ ರಾಜ್ಯಸಭಾ ಸದಸ್ಯರಾದರು. ಇದು ಅವರ ಮೊದಲ ಅವಧಿಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು