ಮಗ ಯುವತಿಯೊಂದಿಗೆ ಪರಾರಿಯಾಗಿದ್ದಕ್ಕೆ ಆತನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ!

ಚೆನ್ನೈ: ತಮಿಳುನಾಡಿನ ವಿರುಧಾನಗರ ಜಿಲ್ಲೆಯ ವಗೈಕುಲಮ್ ನಲ್ಲಿ ಯುವತಿಯೊಂದಿಗೆ ಯುವಕ ಪರಾರಿಯಾಗಿದ್ದ ಕಾರಣಕ್ಕೆ ಆತನ ತಾಯಿಯನ್ನು ಕಟ್ಟಿ ಹಾಕಿ ಥಳಿಸಿರುವ ಘಟನೆ ನಡೆದಿದೆ.  ಥಳಿತಕ್ಕೊಳಗಾದ ಮಹಿಳೆ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೀನಾಕ್ಷಿ(45) ಎಂಬ ಮಹಿಳೆಯೇ ಥಳಿತಕ್ಕೆ ಒಳಗಾದವರು ಎನ್ನಲಾಗಿದ್ದು, ಇವರ ಮಗ ಅನ್ಯ ಜಾತಿಯ ಯುವತಿಯೊಂದಿಗೆ ಪರಾರಿಯಾಗಿದ್ದ. ಹೀಗಾಗಿ ಯುವತಿಯ ಕಡೆಯವರು, ತಾಯಿಯನ್ನು ಹಿಡಿದು ಕಟ್ಟಿ ಹಾಕಿ ಥಳಿಸಿದ್ದಾರೆ ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 14 ಜನರ ವಿರುದ್ಧ ದೂರು ದಾಖಲಾಗಿದೆ. ಇನ್ನೊಂದೆಡೆ ಯುವಕ ಹಾಗೂ ಯುವತಿ ಮದುವೆಯಾಗಿ ಪೊಲೀಸರ ರಕ್ಷಣೆ ಕೋರಿದ್ದಾರೆ.

ಇತ್ತ ಮಗ ಮಾಡಿದ ಕಾರ್ಯಕ್ಕೆ ತಾಯಿ ಹಿಗ್ಗಾಮುಗ್ಗಾ ಥಳಿತಕ್ಕೊಳಗಾಗಿದ್ದಾರೆ. ಅಲ್ಲದೇ, ಈ ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಸದ್ಯ ಈ ಕುರಿತು ದೂರು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Swathi MG

Recent Posts

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

7 mins ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

34 mins ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

42 mins ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

42 mins ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

57 mins ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

1 hour ago