News Karnataka Kannada
Monday, April 29 2024
ತಮಿಳುನಾಡು

ಮಾಜಿ ಐಪಿಎಸ್‌ ಅಧಿಕಾರಿ ಕೆ. ಅಣ್ಣಾಮಲೈ ವಿರುದ್ಧ ಕೇಸ್‌ ದಾಖಲು

Anna Malia
Photo Credit :

ತಮಿಳುನಾಡು: ಪೆಟ್ರೋಲ್‌ ಬೆಲೆ ಇಳಿಸುವಂತೆ ಆಗ್ರಹಿಸಿ ತಮಿಳುನಾಡಿನ ಸಚಿವಾಲಯದವರೆಗೆ ಬೃಹತ್‌ ಪಾದಯಾತ್ರೆ ನಡೆಸಿದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್‌ ಅಧಿಕಾರಿ ಕೆ. ಅಣ್ಣಾಮಲೈ ವಿರುದ್ಧ ತಮಿಳುನಾಡು ಸರ್ಕಾರವು ಕೇಸ್‌ ದಾಖಲಿಸಿದೆ.

ಪಾದಯಾತ್ರೆ ಮೂಲಕ ಪ್ರತಿಭಟನೆ ನಡೆಸಲು ಅನುಮತಿ ಪಡೆದಿರಲಿಲ್ಲ ಎಂದು ಸರ್ಕಾರವು ಅಣ್ಣಾಮಲೈ ಸೇರಿದಂತೆ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಇತರ 5,000 ಜನರ ಮೇಲೆ ಪ್ರಕರಣ ದಾಖಲಿಸಿದೆ. ಕೇಂದ್ರ ಸರ್ಕಾರವು ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಇಳಿಸಿದ್ದರೂ ರಾಜ್ಯ ಸರ್ಕಾರ ಇಳಿಸಿಲ್ಲ ಎಂಬ ಕಾರಣಕ್ಕೆ ಅಣ್ಣಾಮಲೈ ಮತ್ತಿತರರು ಪ್ರತಿಭಟನೆ ನಡೆಸಿದ್ದರು.

ಈ ಕುರಿತು ಮಂಗಳ ವಾರ ಪ್ರತಿಕ್ರಿಯಿಸಿರುವ ಅಣ್ಣಾ ಮಲೈ “ಡಿಎಂಕೆ ಪಕ್ಷವು ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಇಳಿಸುವುದಾಗಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿತ್ತು.

ಕೇಂದ್ರ ಸರ್ಕಾರವು ಎರಡೆರಡು ಬಾರಿ ಇಳಿಕೆ ಮಾಡಿದರೂ ರಾಜ್ಯದಲ್ಲಿ ಪೆಟ್ರೋಲ್‌ ಬೆಲೆ ಇಳಿಕೆಯಾಗಿಲ್ಲ. ಡಿಎಂಕೆ ಪಕ್ಷವು ತನ್ನ ಚುನಾವಣಾ ಘೋಷಣೆಯಂತೆ ಪೆಟ್ರೋಲ್‌ ಬೆಲೆ ಇಳಿಸಬೇಕು” ಎಂದು ಆಗ್ರಹಿಸಿದ್ದರು.

ಪ್ರಸ್ತುತ ಅವರು ಪ್ರತಿಭಟನೆಗೆ ಅವಕಾಶ ಪಡೆದಿಲ್ಲ ಎಂದು ಅವರ ಮೇಲೆ ಕೇಸ್‌ ದಾಖಲಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು