News Karnataka Kannada
Tuesday, April 30 2024
ತಮಿಳುನಾಡು

ಮುಂದಿನ ಕೆಲ ದಿನಗಳಲ್ಲಿ ದಕ್ಷಿಣ ಭಾರತದ ರಾಜ್ಯಗಳ ಹಲವಾರು ನಗರಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ

Rain Main Newsk 2307886304 3
Photo Credit :

ಚೆನೈ : ಭಾರತೀಯ ಹವಾಮಾನ ಇಲಾಖೆ (IMD) ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶ ಮತ್ತು ಇತರ ದಕ್ಷಿಣ ಭಾರತದ ರಾಜ್ಯಗಳ ಹಲವಾರು ನಗರಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ.

ಆಂಧ್ರಪ್ರದೇಶದಲ್ಲಿ, ಪ್ರಕಾಶಂ, ನೆಲ್ಲೂರು, ಚಿತ್ತೂರು ಮತ್ತು ಕಡಪ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ‘ಆರೆಂಜ್’ ಅಲರ್ಟ್ (orange alert)ನೀಡಿದೆ.ಆಂಧ್ರಪ್ರದೇಶದ ಈ ನಾಲ್ಕು ಜಿಲ್ಲೆಗಳಲ್ಲಿ ಗುಡುಗು ಮತ್ತು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ.ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆಯನ್ನೂ ನೀಡಿದೆ.

ಪುದುಚೇರಿ ಮತ್ತು ಕಾರೈಕಾಲ್‌ನಲ್ಲಿ ಈ ತಿಂಗಳ ಆರಂಭದಿಂದ ಭಾರೀ ಮಳೆಯಾಗುತ್ತಿದೆ.ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಪುದುಚೇರಿಯಲ್ಲಿ 11.2 ಸೆಂ.ಮೀ ಮಳೆಯಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ ಮತ್ತು ಎಲ್ಲಾ ಟ್ಯಾಂಕ್‌ಗಳು ಮತ್ತು ಕೆರೆಗಳು ಭರ್ತಿ ಆಗಿವೆ.ಮುಂದಿನ ಎರಡು ದಿನಗಳ ಕಾಲ ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏತನ್ಮಧ್ಯೆ, ಸೋಮವಾರದಂದು ದಕ್ಷಿಣ ತಮಿಳುನಾಡಿನಲ್ಲಿ ಭಾರೀ ಮಳೆಯಾಗಿದೆ ಮತ್ತು ಮಂಗಳವಾರದವರೆಗೆ ದಕ್ಷಿಣ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.ಮಂಗಳವಾರದಿಂದ ಇದರ ತೀವ್ರತೆ ಕಡಿಮೆಯಾಗಲಿದೆ ಎಂದು ತಿಳಿಸಿದೆ.ಗಾಳಿಯ ಒಮ್ಮುಖದ ಪರಿಣಾಮವಾಗಿ ಕನ್ಯಾಕುಮಾರಿ, ತಿರುನಲ್ವೇಲಿ, ತೂತುಕುಡಿ ಮತ್ತು ರಾಮನಾಥಪುರಂ ಸೇರಿದಂತೆ ದಕ್ಷಿಣ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.ಚೆನ್ನೈ ಮತ್ತು ಇತರ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು