ಮೇಕೆದಾಟು ಯೋಜನೆಗೆ ಅನುಮೋದನೆ ನೀಡಬೇಡಿ; ಪ್ರಧಾನಿ ಮೋದಿಗೆ ಸ್ಟಾಲಿನ್‌ ಒತ್ತಾಯ

ಚೆನ್ನೈ : ಬೆಂಗಳೂರು ಸೇರಿದಂತೆ ಇನ್ನಿತರ ರಾಜ್ಯಗಳಿಗೆ ಕುಡಿಯುವ ನೀರು ಒದಗಿಸುವ ಕರ್ನಾಟಕ ಸರ್ಕಾರದ ‘ಮೇಕೆದಾಟು’ ಯೋಜನೆಗೆ ಅನುಮೋದನೆ ನೀಡಬಾರದು ಎಂದು ಕೇಂದ್ರ ಸರ್ಕಾರಕ್ಕೆ ತಮಿಳುನಾಡು ಸರ್ಕಾರ ಒತ್ತಾಯಿಸಿದೆ.

ದೆಹಲಿ ಪ್ರವಾಸದಲ್ಲಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಕುಡಿಯುವ ನೀರಿನ ಹೆಸರಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲು ಮುಂದಾಗಿರುವ ಕರ್ನಾಟಕ ಸರ್ಕಾರದ ಮೇಕೆದಾಟು ಯೋಜನೆಯು 2018ರ ಸುಪ್ರೀಂ ಕೋರ್ಟ್ ತೀರ್ಪಿನ ಉಲ್ಲಂಘನೆಯಾಗಿದೆ. ಹೀಗಾಗಿ ಮೇಕೆದಾಟು ಯೋಜನೆ ಜಾರಿಯು ತಮಿಳುನಾಡು ರೈತ ಸಮುದಾಯದ ಹಿತಾಸಕ್ತಿ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಿದರು.

ಅಲ್ಲದೆ ವರ್ಷದಲ್ಲಿ ಉತ್ತಮ ಮಳೆಯಾಗಲಿ ಅಥವಾ ಸಾಮಾನ್ಯ ಮಳೆಯೇ ಆಗಲಿ, ತನ್ನ ಪಾಲಿನ ನೀರನ್ನು ಕರ್ನಾಟಕ ಸರ್ಕಾರ ಬಿಡುಗಡೆ ಮಾಡುವುದಿಲ್ಲ ಎಂದು ದೂರಿದ ಅವರು, ಮೇಕೆದಾಟು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಕರ್ನಾಟಕದ ಯಾವುದೇ ಯೋಜನೆಗಳಿಗೆ ಅನುಮೋದನೆ ನೀಡದಂತೆ ಕೇಂದ್ರ ಜಲಶಕ್ತಿ ಇಲಾಖೆಗೆ ನಿರ್ದೇಶನ ನೀಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ಜೊತೆಗೆ ಮೇಕೆದಾಟು ಯೋಜನೆಗೆ ಅನುಮೋದನೆ ನೀಡಬಾರದು ಎಂದು ಕಾವೇರಿ ನಿರ್ವಹಣೆ ಪ್ರಾಧಿಕಾರಕ್ಕೂ ಸೂಚನೆ ನೀಡಬೇಕು. ತಮಿಳುನಾಡು ಸರ್ಕಾರದ ಅನುಮತಿಯಿಲ್ಲದೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಕರ್ನಾಟಕ ಸರ್ಕಾರ ಯಾವುದೇ ಯೋಜನೆ ಕೈಗೊಳ್ಳಬಾರದು ಎಂದು ಅವರು ಒತ್ತಾಯಿಸಿದರು.

Gayathri SG

Recent Posts

ಸುಚರಿತಾ ಟಿಕೆಟ್‌ ನಿರಾಕರಣೆ : ನಾರಾಯಣ್‌ ಪಟ್ನಾಯಕ್‌ಗೆ ʻಕೈʼ ಅವಕಾಶ

ಸುಚರಿತಾ ಮೊಹಂತಿ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿ ಟಿಕೆಟ್‌ ವಾಪಸ್‌ ನೀಡಿದ ಬೆನ್ನಲ್ಲೆ ಒಡಿಶಾದ ಪುರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ…

5 mins ago

ಮೂಕ ಮಗುವನ್ನು ಕಾಲುವೆಗೆ ಎಸೆದ ತಾಯಿ : ಮೊಸಳೆ ಬಾಯಲ್ಲಿತ್ತು ಮೃತದೇಹ

ಗಂಡನ ಮೇಲಿನ ಸಿಟ್ಟಿಗೆ ಹೆತ್ತ ಮಗು ಎಂದು ಯೋಚಿಸದೆ ಮಗುವನ್ನು ನಾಲೆಗೆ ಎಸದು ಬಂದಿರುವ ದಾರಣ ಘಟನೆ ಉತ್ತರ ಕನ್ನಡ…

25 mins ago

ಶಬರಿಮಲೆಯಲ್ಲಿ ಮಂಡಲ, ಮಕರ ಮಹೋತ್ಸವಕ್ಕೆ ಆನ್ಲೈನ್ ಮುಂಗಡ ಬುಕ್ಕಿಂಗ್ ಕಡ್ಡಾಯ

ಕೇರಳದ ಪ್ರಸಿದ್ಧ ಯಾತ್ರಾ ಸ್ಥಳ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಂಡಲ ಹಾಗೂ ಮಕರ ಮಹೋತ್ಸವ ಋತುವಿನಲ್ಲಿ ಇನ್ನು ದರ್ಶನಕ್ಕೆ…

26 mins ago

ಮೊಬೈಲ್‌ ಬಳಕೆ ಕಡಿಮೆ ಮಾಡು ಎಂದಿದಕ್ಕೆ ಅಣ್ಣನನ್ನೇ ಕೊಂದ ತಂಗಿ

ಮೊಬೈಲ್‌ ಬಳಕೆ ಕಡಿಮೆ ಮಾಡು ಎಂದು ತಿಳಿಹೇಳಿದಕ್ಕೆ ತಂಗಿಯೊಬ್ಬಳು ಅಣ್ಣನನ್ನು ಹತ್ಯೆ ಮಾಡಿರುವ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ. 14 ವರ್ಷದ…

49 mins ago

ಇಂದು ಸಂಜೆ ಅಯೋಧ್ಯೆಗೆ ಮೋದಿ ಭೇಟಿ; ರಾಮಲಲ್ಲಾನ ದರ್ಶನ, ರೋಡ್ ಶೋ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಇಂದು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ರಾಮಲಲ್ಲಾನ ದರ್ಶನ ಪಡೆದು ಬಳಿಕ ರೋಡ್​ ಶೋ…

54 mins ago

ದಾಖಲೆಗಳ ಸರದಾರ ಕೊಹ್ಲಿ ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆ

ಐಪಿಎಲ್​ನ 52ನೇ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ ಹೊಸ ಮೈಲುಗಲ್ಲು ದಾಟಿದ್ದಾರೆ. ಈ ಮೂಲಕ ಈ ಸಾಧನೆ…

1 hour ago