ತಮಿಳುನಾಡು

ಮೇಕೆದಾಟು ಯೋಜನೆ ವಿರೋಧಿಸಿ ಅಣ್ಣಾಮಲೈ ಉಪವಾಸ

ತಂಜಾವೂರು: ಕರ್ನಾಟಕದ ಮೇಕೆದಾಟು ಆಣೆಕಟ್ಟು ಯೋಜನೆಯನ್ನು ವಿರೋಧಿಸಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ನೇತೃತ್ವದಲ್ಲಿ ರೈತರು ತಂಜಾವೂರಿನಲ್ಲಿ ಇಂದು ಒಂದು ದಿನದ ಉಪವಾಸ ಸತ್ಯಗ್ರಹ ಆಚರಿಸಿದರು.
ನಿರಶನದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಯೋಜನೆ ನ್ಯಾಯಸಮ್ಮತವಲ್ಲ. ಕರ್ನಾಟಕ ಸರ್ಕಾರವು ಈ ಯೋಜನೆಯನ್ನು ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿದರು.ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡು ಪರ ನಿಲುವು ವ್ಯಕ್ತಪಡಿಸುತ್ತಾರೆ ಎಂಬ ವಿಶ್ವಾಸವನ್ನು ಅವರು ಇದೇ ಸಂದರ್ಭದಲ್ಲಿ ವ್ಯಕ್ತಪಡಿಸಿದರು. ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ವಿವಾದಕ್ಕೆ ಕಾರಣವಾಗಿರುವ ಮೇಕೆದಾಟು ಆಣೆಕಟ್ಟು ಯೋಜನೆ ಬೃಹತ್ ಹೋರಾಟದ ಸ್ವರೂಪ ಪಡೆಯುತ್ತಿದೆ. ಉಭಯ ರಾಜ್ಯಗಳಲ್ಲೂ ಇಂದು ಪರ ಮತ್ತು ವಿರೋಧ ಪ್ರತಿಭಟನೆಗಳು ನಡೆದವು.
ಈ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕದಲ್ಲಿ ರೈತ ಸಮುದಾಯ, ವಿವಿಧ ಸಂಘಸಂಸ್ಥೆಗಳು ಮತ್ತು ರಾಜಕೀಯ ಪಕ್ಷಗಳು ಪ್ರತಿಭಟನೆ ನಡೆಸಿವೆ.

 

Indresh KC

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

1 hour ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

2 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

3 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

3 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

3 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

3 hours ago