News Karnataka Kannada
Sunday, May 05 2024
ತಮಿಳುನಾಡು

ರೈಲು ಡಿಕ್ಕಿ: ಹೆಣ್ಣಾನೆ ಮತ್ತದರ ಎರಡು ಮರಿಗಳ ದಾರುಣ ಸಾವು

New Project
Photo Credit :

ಕೊಯಂಬತ್ತೂರು: ​ಒಂದು ಹೆಣ್ಣಾನೆ ಮತ್ತು ಅದರ ಎರಡು ಪುಟ್ಟ ಹೆಣ್ಣು ಮರಿಗಳು ರೈಲು ಡಿಕ್ಕಿ ಹೊಡೆದು ಮೃತಪಟ್ಟ ಹೃದಯವಿದ್ರಾವಕ ಘಟನೆ ಶುಕ್ರವಾರ ರಾತ್ರಿ ತಮಿಳುನಾಡು-ಕೇರಳದ ಗಡಿಯಾದ ನವಕ್ಕರೈ ಸಮೀಪದ ಮಾವುತ್ತಂಪತ್ತಿ ಗ್ರಾಮದ ಬಳಿ ನಡೆದಿದೆ.

25 ವರ್ಷದ ಹೆಣ್ಣಾನೆ ಹಾಗೂ ಅದರ 12 ವರ್ಷದ ಎರಡು ಮರಿಗಳು ರೈಲು ಹಳಿ ದಾಟುತ್ತಿದ್ದಾಗ ಮಂಗಳೂರು–ಚೆನ್ನೈ ಎಕ್ಸಪ್ರೆಸ್‌ ರೈಲು ಡಿಕ್ಕಿಯಾಗಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.

ಮಡುಕ್ಕುರೈ ಬಳಿ ರಾತ್ರಿ 9 ರ ಸಮಯದಲ್ಲಿ ಈ ದುರ್ಘಟನೆ ನಡೆದಿದೆ. ಘಟನೆ ಸಂಭವಿಸಿದಾಗ ರೈಲು ಅತಿ ವೇಗವಾಗಿ ಚಲಿಸುತ್ತಿತ್ತು, ಡಿಕ್ಕಿ ರಭಸಕ್ಕೆ ಆನೆಗಳು ಸ್ಥಳದಲ್ಲೇ ಮೃತಪಟ್ಟಿವೆ. ಸ್ಥಳಕ್ಕೆ ಕಾರ್ಯಾಚರಣೆ ತಂಡ ತೆರಳಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 2 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು