ಲೈಂಗಿಕ ದೌರ್ಜನ್ಯ ಹಿನ್ನೆಲೆ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ ಬೆನ್ನಲ್ಲೇ ಆರೋಪಿ ಶಿಕ್ಷಕ ಆತ್ಮಹತ್ಯೆಗೆ ಶರಣು

ಕರೂರ್​​: ತಮಿಳುನಾಡಿನ ಕರೂರಿನಲ್ಲಿ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ 12ನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ ಕೆಲವು ದಿನಗಳ ನಂತರ ನಿನ್ನೆ ತಡರಾತ್ರಿ ಆರೋಪಿ ಗಣಿತ ಶಿಕ್ಷಕ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸರವಣನ್(42) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ. ಸಾವಿಗೂ ಮುನ್ನ ಶಿಕ್ಷಕ ಡೆತ್​​ನೋಟ್​ ಅನ್ನು ಬರೆದಿದ್ದು, ಇದರಲ್ಲಿ ವಿದ್ಯಾರ್ಥಿನಿ ಮೃತಪಟ್ಟ ನಂತರ ಆಕೆಯ ಸಾವಿನ ಬಗ್ಗೆ ಜನರು ಮತ್ತು ವಿದ್ಯಾರ್ಥಿಗಳು ಗೇಲಿ ಮಾಡುತ್ತಿದ್ದರು. ಇದರಿಂದ ಮುಜುಗರಕ್ಕೊಳಗಾಗಿ ಹಾಗೂ ಹುಡುಗಿ ಯಾರ ಹೆಸರನ್ನೂ ಹೇಳದಿದ್ದರೂ ನನ್ನ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದರು ಎಂದು ಪತ್ರದಲ್ಲಿ ಬರೆಯಲಾಗಿದೆ.

ಕಳೆದ ವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ 12ನೇ ತರಗತಿ ವಿದ್ಯಾರ್ಥಿನಿ ಡೆತ್​ನೋಟ್​​ನಲ್ಲಿ​​ ಹೀಗೆ ಬರೆದಿದ್ದಾಳೆ. ಕರೂರ್ ಜಿಲ್ಲೆಯಲ್ಲಿ ಲೈಂಗಿಕ ಕಿರುಕುಳದಿಂದ ಸಾಯುವ ಕೊನೆಯ ಹುಡುಗಿ ನಾನೇ ಆಗಿರಬೇಕು. ನನ್ನ ಈ ನಿರ್ಧಾರಕ್ಕೆ ಕಾರಣ ಯಾರು ಎಂದು ಹೇಳಲು ನನಗೆ ಭಯವಾಗಿದೆ. ನಾನು ಈ ಭೂಮಿಯ ಮೇಲೆ ದೀರ್ಘಕಾಲ ಬದುಕಲು ಮತ್ತು ಇತರರಿಗೆ ಸಹಾಯ ಮಾಡಲು ಬಯಸಿದ್ದೆ, ಆದರೆ ಈಗ ನಾನು ಈ ಪ್ರಪಂಚವನ್ನು ಬೇಗನೆ ತೊರೆಯಬೇಕಾಗಿದೆ ಎಂದು ಬರೆಯಲಾಗಿತ್ತು.

ತನಿಖೆಯ ಭಾಗವಾಗಿ, ಪೊಲೀಸರು ಈಗಾಗಲೇ ಆಕೆಯ ಶಾಲೆಯ ಶಿಕ್ಷಕರು ಮತ್ತು ಸಿಬ್ಬಂದಿಯನ್ನು ಪ್ರಶ್ನಿಸಿದ್ದಾರೆ. ಸರವಣನ್ ಅವರನ್ನೂ ಪ್ರಶ್ನಿಸಲಾಗಿತ್ತು. ಇದರಿಂದ ಒತ್ತಡಕ್ಕೊಳಗಾದ ಅವರು ಈಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗಣಿತ ಶಿಕ್ಷಕನ ಮೇಲೆ ಯಾವುದೇ ಅನುಮಾನವಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಆದರೂ ಸರವಣನ್ ನಿನ್ನೆ ರಾತ್ರಿ ತಿರುಚ್ಚಿಯಲ್ಲಿರುವ ತಮ್ಮ ಮಾವನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Gayathri SG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

12 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

26 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

38 mins ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

54 mins ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

1 hour ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

1 hour ago