ಲೈಂಗಿಕ ಶೋಷಣೆಯಿಂದ ನೊಂದ 17 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣು

ಕರೂರು: ಲೈಂಗಿಕ ಶೋಷಣೆಯಿಂದ ನೊಂದ 17 ವರ್ಷ ಪ್ರಾಯದ ಬಾಲಕಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ತಮಿಳುನಾಡು ರಾಜ್ಯದ ಕರೂರಿನಲ್ಲಿ ನಡೆದಿದೆ. ಶುಕ್ರವಾರಲೈಂಗಿಕ ಶೋಷಣೆಯಿಂದ ನೊಂದ 17 ವರ್ಷ ಪ್ರಾಯದ ಬಾಲಕಿ ಸಂಜೆ ಈ ಘಟನೆ ನಡೆದಿದೆ.

12ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಶುಕ್ರವಾರ ಸಂಜೆ ಮನೆಗೆ ಬಂದ ಬಳಿಕ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.ಬಾಲಕಿಯ ತಾಯಿ ಈ ಸಮಯದಲ್ಲಿ ಮನೆಯಲ್ಲಿ ಇರಲಿಲ್ಲ. ಪಕ್ಕದ ಮನೆಯ ಮಹಿಳೆಯೊಬ್ಬರು ಘಟನೆಯನ್ನು ನೋಡಿ ತಾಯಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ವರದಿ ತಿಳಿಸಿದೆ.

ಆತ್ಮಹತ್ಯೆಗೂ ಮೊದಲು ಬಾಲಕಿಯು ಡೆತ್ ನೋಟ್ ಬರೆದಿದ್ದಾಳೆ. “ಕರೂರ್ ಜಿಲ್ಲೆಯಲ್ಲಿ ಲೈಂಗಿಕ ಕಿರುಕುಳದಿಂದ ಸಾಯುವ ಕೊನೆಯ ಹುಡುಗಿ ನಾನೇ ಆಗಿರಬೇಕು. ನನ್ನ ಈ ನಿರ್ಧಾರಕ್ಕೆ ಕಾರಣ ಯಾರು ಎಂದು ಹೇಳಲು ನನಗೆ ಭಯವಾಗಿದೆ. ನಾನು ಈ ಭೂಮಿಯಲ್ಲಿ ದೀರ್ಘಕಾಲ ಬದುಕಬೇಕು ಮತ್ತು ಇತರರಿಗೆ ಸಹಾಯ ಮಾಡಬೇಕೆಂದು ಬಯಸಿದ್ದೆ, ಆದರೆ ಈಗ ನಾನು ಇಷ್ಟು ಬೇಗ ಇಹಲೋಕ ತ್ಯಜಿಸುವಂತಾಗಿದೆ” ಎಂದು ಬಾಲಕಿ ಬರೆದಿದ್ದಾಳೆ.

ತಮಿಳುನಾಡು ರಾಜ್ಯದಲ್ಲಿ ಲೈಂಗಿಕ ಶೋಷಣೆಯ ಕಾರಣದಿಂದ ಇತ್ತೀಚೆಗೆ ನಡೆದ ಎರಡನೇ ಆತ್ಮಹತ್ಯೆ ಪ್ರಕರಣ ಇದಾಗಿದೆ. ಕಳೆದ ವಾರ ಕೊಯಮತ್ತೂರು ಜಿಲ್ಲೆಯಲ್ಲಿ 17 ವರ್ಷದ ವಿದ್ಯಾರ್ಥಿನಿಯೊಬ್ಬಳು ಶಾಲಾ ಶಿಕ್ಷಕರ ಲೈಂಗಿನ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿದ್ದಳು.

Gayathri SG

Recent Posts

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

51 seconds ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

11 mins ago

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

43 mins ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

51 mins ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

53 mins ago

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

1 hour ago