ತಮಿಳುನಾಡು

ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ

ಚೆನ್ನೈ,: ನೀಲ್‌ಗಿರಿ ಜಿಲ್ಲೆಯಲ್ಲಿ ಘಟನೆ ಸಂಭವಿಸಿದೆ. ವಿಮಾನದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 14 ಮಂದಿ ಪ್ರಯಾಣಿಸುತ್ತಿದ್ದ  . ಸೇನಾ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ಪತನವಾಗಿರುವ ಮಾಹಿತಿ ತಿಳಿದುಬಂದಿದೆ.

ಊಟಿಯಲ್ಲಿ ನಿಗದಿಯಾಗಿದ್ದ ಸಮಾರಂಭಕ್ಕೆ ತೆರಳುತ್ತಿದ್ದರು. ಬಿಪಿನ್ ರಾವತ್ ಪತ್ನಿ ಹಾಗೂ ಬ್ರಿಗೆಡಿಯರ್ ರಾಂಕ್‌ನ ಅಧಿಕಾರಿಗಳಿದ್ದರು.

ಮೂವರನ್ನು ವೆಲ್ಲಿಂಗ್ಟನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರಿಗಾಗಿ ಶೋಧಕಾರ್ಯ ನಡೆಯುತ್ತಿದೆ. ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಘಟನೆ ನಡೆದಿದೆ. ನಾಲ್ಕು ಮಂದಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಎಂಐ ಸೀರೀಸ್‌ನ ಹೆಲಿಕಾಪ್ಟರ್ ಇದಾಗಿತ್ತು.

ಸೇನೆ ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯ ಮುಂದುವರೆಸಿದ್ದಾರೆ, ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಕುರಿತು ಯಾವುದೇ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

ಐಎಎಫ್ ಎಂಐ-17ವಿ5 ಹೆಲಿಕಾಪ್ಟರ್ ಇದಾಗಿದೆ, ಹೆಲಿಕಾಪ್ಟರ್‌ನಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಇರುವುದನ್ನು ಭಾರತೀಯ ಸೇನೆ ಖಚಿತಪಡಿಸಿದೆ. ಜತೆಗೆ ತನಿಖೆಗೆ ಆದೇಶಿಸಿದೆ.

ಹವಾಮಾನ ವೈಪರೀತ್ಯವೇ ಹೆಲಿಕಾಪ್ಟರ್ ಪತನಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ತಮಿಳುನಾಡಿನ ಕುನೂರ್‌ನಲ್ಲಿ ಘಟನೆ ನಡೆದಿದೆ. ಕೊಯಮತ್ತೂರು, ಸುಳೂರ್ ನಡುವೆ ಘಟನೆ ನಡೆದಿದೆ.

Swathi MG

Recent Posts

ಖಾರವಾದ ಚಿಪ್ಸ್ ತಿಂದ 14ರ ಬಾಲಕನಿಗೆ ಹೃದಯ ಸ್ತಂಭನ

ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…

14 mins ago

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

31 mins ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

60 mins ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

1 hour ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

2 hours ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

2 hours ago