ಒಮಿಕ್ರಾನ್ ಭೀತಿ ಎಲ್ಲೆಡೆ ಹೆಚ್ಚಾಗಿದೆ, ಈ ಹಿನ್ನೆಲೆ ಈ ಬಾರಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ. ಸರ್ಕಾರ ಡಿಸೆಂಬರ್ 31 ಹಾಗೂ ಜನವರಿ 1 ರಂದು ಬೀಚ್ಗಳಿಗೆ ಸಾರ್ವಜನಿಕರಿಗೆ ನಿರ್ಬಂಧ ಹೇರಿದೆ.
ತಮಿಳುನಾಡಿನಲ್ಲಿ ಬೀಚ್ಗಳ ಸಂಖ್ಯೆ ಹೆಚ್ಚಿದ್ದು, ಹೊಸ ವರ್ಷಾಚರಣೆಗೆ ಹೆಚ್ಚಿನ ಮಂದಿ ಬೀಚ್ಗಳತ್ತ ಮುಖ ಮಾಡುತ್ತಾರೆ. ಗುಂಪಿನಲ್ಲಿ ಸೇರುತ್ತಾರೆ. ಇದರಿಂದಾಗಿ ಸೋಂಕು ಹರಡುವ ಸಾಧ್ಯತೆ ಹೆಚ್ಚಿದ್ದು, ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.
ಈ ಬಗ್ಗೆ ಮುಖ್ಯಮಂತ್ರಿ ಸ್ಟಾಲಿನ್ ಮಾತನಾಡಿದ್ದು, ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟಲು ಡಿ.31 ಹಾಗೂ ಜ.1 ರಂದು ಮರೀನಾ ಬೀಚ್ ಸೇರಿದಂತೆ ರಾಜ್ಯದ ಹಲವು ಬೀಚ್ಗಳಿಗೆ ಸಾರ್ವಜನಿಕರಿಗೆ ನಿರ್ಬಂಧ ಹೇರಲು ನಿರ್ಧರಿಸಲಾಗಿದೆ ಎಂದಿದ್ದಾರೆ.