News Karnataka Kannada
Sunday, April 28 2024
ತಮಿಳುನಾಡು

IPL ಪಂದ್ಯಾವಳಿಯಲ್ಲಿ ಕ್ಯಾಪ್ಟನ್​ ಗಿಲ್​ಗೆ 12 ಲಕ್ಷ ರೂ. ದಂಡ!

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಗುಜರಾತ್ ಟೈಟಾನ್ಸ್ ನಾಯಕ ಶುಭ್ಮನ್ ಗಿಲ್ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.
Photo Credit : NewsKarnataka

ಚೆನ್ನೈ: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಗುಜರಾತ್ ಟೈಟಾನ್ಸ್ ನಾಯಕ ಶುಭ್​ಮನ್ ಗಿಲ್ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ ಐಪಿಎಲ್‌ನ ನೀತಿ ಸಂಹಿತೆಯ ಅಡಿಯಲ್ಲಿ ಈ ಶಿಕ್ಷೆಗೆ ಶುಭ್​ಮನ್ ಗಿಲ್ ಗುರಿಯಾಗಿದ್ದಾರೆ. ಐಪಿಎಲ್​ ಪಂದ್ಯಾವಳಿ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್​ನಿಂದ ಒಬ್ಬ ಫೀಲ್ಡರ್​ನನ್ನು ಕಡಿತ ಮಾಡಲಾಗುತ್ತದೆ. ಅದರಂತೆ ಶುಭ್​ಮನ್ ಗಿಲ್ 12 ಲಕ್ಷ ರೂ. ದಂಡದ ಮೊತ್ತ ಪಾವತಿಸಬೇಕಿದೆ.

ಐಪಿಎಲ್​ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್​ನಿಂದ ಒಬ್ಬ ಫೀಲ್ಡರ್​ನನ್ನು ಕಡಿತ ಮಾಡಲಾಗುತ್ತದೆ. ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ ನಾಯಕನಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ 6 ಲಕ್ಷ ಅಥವಾ ಪಂದ್ಯದ ಶುಲ್ಕದ 25% ದಂಡವನ್ನು ವಿಧಿಸಲಾಗುತ್ತದೆ.

ಇನ್ನು ಈ ತಪ್ಪನ್ನು ಮೂರನೇ ಬಾರಿ ಆವರ್ತಿಸಿದರೆ, ತಂಡದ ನಾಯಕನಿಗೆ 30 ಲಕ್ಷ ದಂಡ ವಿಧಿಸಲಾಗುತ್ತದೆ. ಅಲ್ಲದೆ ನಾಯಕ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಲಿದ್ದಾರೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ 12 ಲಕ್ಷ ಅಥವಾ ಅವರ ಪಂದ್ಯದ ಶುಲ್ಕದ 50% ದಂಡವನ್ನು ವಿಧಿಸಲಾಗುತ್ತದೆ.

ಇದೀಗ ನಾಯಕನಾಗಿ ತಮ್ಮ 2ನೇ ಪಂದ್ಯದಲ್ಲೇ ಶುಭ್​ಮನ್ ಗಿಲ್ ಸ್ಲೋ ಓವರ್​ ರೇಟ್​ ಶಿಕ್ಷೆಗೆ ಗುರಿಯಾಗಿದ್ದು, ಹೀಗಾಗಿ ಮುಂದಿನ ಪಂದ್ಯದಲ್ಲಿ ಎಚ್ಚರಿಕೆ ವಹಿಸುವ ಸಾಧ್ಯತೆಯಿದೆ. ಇಲ್ಲದಿದ್ದರೆ ಈ ತಪ್ಪು ಇನ್ನೆರಡು ಬಾರಿ ಪುನರಾವರ್ತನೆಯಾದರೆ ಗಿಲ್ ಒಂದು ಪಂದ್ಯದಿಂದ ಹೊರಗುಳಿಯಬೇಕಾಗುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು