ಚೆನ್ನೈ, ಮಾ.22: ತಮಿಳುನಾಡಿನ ಕಾಂಚೀಪುರಂನ ಪಟಾಕಿ ಘಟಕದಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಎಂಟು ಮಂದಿ ಸಾವನ್ನಪ್ಪಿದ್ದಾರೆ ಮತ್ತು 13 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಾಳುಗಳನ್ನು ಕಾಂಚೀಪುರಂ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಬುಧವಾರ ಮಧ್ಯಾಹ್ನ ಸ್ಫೋಟ ಸಂಭವಿಸಿದಾಗ ಘಟಕದಲ್ಲಿ ೨೫ ಜನರು ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಅಗ್ನಿಶಾಮಕ ದಳದ ನಾಲ್ಕು ಘಟಕಗಳು ಬೆಂಕಿಯನ್ನು ನಂದಿಸಿದವು. ಸ್ಫೋಟದ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.