News Karnataka Kannada
Saturday, April 20 2024
Cricket
ತಮಿಳುನಾಡು

ಕಾವೇರಿ ನೀರು ಬಿಡುಗಡೆ ಆಗ್ರಹಿಸಿ ತಮಿಳುನಾಡಿನ 8 ಜಿಲ್ಲೆಗಳಲ್ಲಿ ಬಂದ್‌

Bandh in 8 districts of Tamil Nadu demanding release of Cauvery water
Photo Credit : News Kannada

ಚೆನ್ನೈ: ಕರ್ನಾಟಕ ಸರ್ಕಾರವು ಕಾವೇರಿ ನದಿ ನೀರನನ್ನು ಸಮರ್ಪಕವಾಗಿ ಬಿಡುವಂತೆ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು ಎಂದು ಒತ್ತಾಯಿಸಿ ತಮಿಳುನಾಡಿನ 8 ಜಿಲ್ಲೆಗಳಲ್ಲಿ ಬಂದ್‌ ಗೆ ಕರೆ ನೀಡಲಾಗಿತ್ತು.

ಕಾವೇರಿ ನೀರಿನ ಸಮರ್ಪಕ ಪೂರೈಕೆ ಇಲ್ಲದ ಕಾರಣ ಬೆಳೆಗಳಿಗೆ ಹಾನಿಯಾಗಿದೆ ಎಂದು ಆರೋಪಿಸಿ ಕರ್ನಾಟಕದ ವಿರುದ್ಧ ತಮಿಳುನಾಡು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ತಮಿಳುನಾಡಿನ ರೈತ ಗುಂಪುಗಳು ಬುಧವಾರ ಎಂಟು ಜಿಲ್ಲೆಗಳಲ್ಲಿ ಬಂದ್‌ಗೆ ಕರೆ ನೀಡಿವೆ. ತಮ್ಮ ಪ್ರತಿಭಟನೆಯ ಮೂಲಕ ತಮಿಳುನಾಡಿಗೆ ಸಾಕಷ್ಟು ಪ್ರಮಾಣದ ಕಾವೇರಿ ನೀರು ಬಿಡುವಂತೆ ತಮ್ಮ ಬೇಡಿಕೆಗಳನ್ನು ಈಡೇರಿಸಲು ರೈತರು ಒತ್ತಾಯಿಸಿದ್ದಾರೆ. ತಂಜಾವೂರು, ತಿರುಚ್ಚಿ, ತಿರುವರೂರ್, ನಾಗಪಟ್ಟಿಣಂ, ಪುದುಕೊಟ್ಟೈ, ಮೈಲಾಡುತುರೈ, ಕಡಲೂರು ಮತ್ತು ಅರಿಯಲೂರು ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಹಲವಾರು ಅಂಗಡಿಗಳು ಬುಧವಾರ ಮುಚ್ಚಲ್ಪಟ್ಟಿವೆ. ಪರಿಸ್ಥಿತಿಯ ಬಗ್ಗೆ ಪ್ರತಿಕ್ರಿಯಿಸಿದ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಕಾವೇರಿ ಡೆಲ್ಟಾ ಪ್ರದೇಶದಲ್ಲಿ ಕನಿಷ್ಠ 40,000 ಎಕರೆ ಪ್ರದೇಶದಲ್ಲಿ ಬೆಳೆದಿರುವ ಬೆಳೆಗಳು ನೀರಿನ ಕೊರತೆಯಿಂದಾಗಿ ನಾಶವಾಗಿವೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು