ಬೊಜ್ಜು ಕರಗಿಸುವ ಶಸ್ತ್ರಚಿಕಿತ್ಸೆ: ಪ್ರಾಣ ಕಳೆದುಕೊಂಡ ಯುವಕ

ತಮಿಳುನಾಡು: ಬೊಜ್ಜು ಕರಗಿಸುವ ಶಸ್ತ್ರಚಿಕಿತ್ಸೆಯಲ್ಲಿ 26 ವರ್ಷದ ಯುವಕನೊಬ್ಬ ಪ್ರಾಣ ಕಳೆದುಕೊಂಡಿರುವ ಘಟನೆ ರಾಜಧಾನಿ ಚೆನ್ನೈನಲ್ಲಿ ನಡೆದಿದೆ.

ಪುದುಚೇರಿ ಮೂಲದ 26 ವರ್ಷದ ಹೇಮಚಂದ್ರನ್ ಮೃತ ಪಟ್ಟ ಯುವಕ. ಅವರು ಚೆನ್ನೈನ ಪಮ್ಮಲ್‌ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ತೂಕ ಇಳಿಸುವ ಚಿಕಿತ್ಸೆಗೆ ಒಳಗಾಗಿದ್ದರು. ಆದರೆ ಚಿಕಿತ್ಸೆ ಆರಂಭಿಸಿದ 15 ನಿಮಿಷದಲ್ಲಿ ಅವರಿಗೆ ಹೃದಯಾಘಾತವಾಗಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

ಹೇಮಚಂದ್ರನ್  ಸುಮಾರು 150 ಕೆ.ಜಿ. ತೂಕವನ್ನು ಹೊಂದಿದ್ದ. ಸ್ಥೂಲಕಾಯತೆಯಿಂದ ಸಾಕಷ್ಟು ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಈತನ ಬೊಜ್ಜನ್ನು ಶಸ್ರಚಿಕಿತ್ಸೆಯ ಮೂಲಕ ಕರಗಿಸುವುದಾಗಿ ವೈದ್ಯರು ಭರವಸೆ ನೀಡಿದ್ದರು. ಇಲ್ಲಿ ಈ ಶಸ್ತ್ರಚಿಕಿತ್ಸೆಗೆ ರೂ.4 ಲಕ್ಷ ವೆಚ್ಚವಾಗಲಿದೆ ಎಂದು ತಿಳಿಸಿದ್ದರು.

ಯುವಕನ ಸಾವಿನ ತನಿಖೆಗೆ ಇಬ್ಬರು ಜಂಟಿ ನಿರ್ದೇಶಕರನ್ನೊಳಗೊಂಡ ಸಮಿತಿ ರಚಿಸುವಂತೆ ವೈದ್ಯಕೀಯ ಇಲಾಖೆ ಆದೇಶ ನೀಡಿದೆ. ಯುವಕನ ಸಾವಿನ ಕುರಿತು 2 ದಿನಗಳಲ್ಲಿ ತನಿಖಾ ವರದಿ ಸಲ್ಲಿಸುವಂತೆ ಆದೇಶಿಸಿದೆ. ಸೂಕ್ತ ಚಿಕಿತ್ಸೆ ದೊರೆಯದೇ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಚೆನ್ನೈ ಪೊಲೀಸ್​​​ ಠಾಣೆಯಲ್ಲಿ ದೂರು ನೀಡಿದ್ದಾರೆ.

 

 

Chaitra Kulal

Recent Posts

ಬೀದರ್‌: ಬಿಸಿ ದೋಸೆಯಂತೆ ಮಾರಾಟವಾಗುತ್ತಿದೆ ಎಸಿ, ಕೂಲರ್‌

ಬಿಸಿಲು ಹಾಗೂ ಅದರ ಝಳದಿಂದ ಜನ ಒಂದೆಡೆ ತೀವ್ರ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದರೆ, ಏರ್‌ ಕಂಡಿಷನರ್‌ (ಎಸಿ), ಏರ್‌ ಕೂಲರ್‌ಗಳ…

7 mins ago

ಪರಿಷತ್ ಚುನಾವಣೆಯಲ್ಲೂ ಜೆಡಿಎಸ್ ಜತೆ ಮೈತ್ರಿ ಮುಂದುವರಿಕೆ: ಬಿ.ಎಸ್.ಯಡಿಯೂರಪ್ಪ

ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿಮೈತ್ರಿ ಮುಂದುವರಿಯಲಿದ್ದು, ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ…

24 mins ago

ವೇಣುಗೋಪಾಲಸ್ವಾಮಿ ದೇಗುಲ ಬಳಿ ಅಡ್ಡಾಡುತ್ತಿರುವ ಒಂಟಿ ಗಜ

ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…

42 mins ago

ಕಾಡಾನೆಯಿಂದ ಬೆಳೆ ನಾಶ: ಮನನೊಂದು ರೈತ ಆತ್ಮಹತ್ಯೆ

ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.

44 mins ago

ಬಂಡೀಪುರ ಪ್ರವೇಶದ್ವಾರದ ಬಳಿ ಕೆಟ್ಟು ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ…

59 mins ago

ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ವ್ಯವಸ್ಥೆ ಇಲ್ಲದೆ ಬೆಟ್ಟದ ತಪ್ಪಲಿನಲ್ಲೇ ನಿಂತ ಭಕ್ತರು

ವಾರಾಂತ್ಯದ ರಜೆ ಹಿನ್ನೆಲೆ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಭಕ್ತಗಣ ಆಗಮಿಸಿದ್ದರು…

1 hour ago