ಚೆನ್ನೈ, ಅ.15: ತಮಿಳುನಾಡಿನ ಕೃಷ್ಣಗಿರಿಯಲ್ಲಿರುವ ಕಾರ್ಪೊರೇಷನ್ ಮಾಧ್ಯಮಿಕ ಶಾಲೆಯ ಎಲ್ಲಾ 67 ವಿದ್ಯಾರ್ಥಿಗಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಶುಕ್ರವಾರ ಮಧ್ಯಾಹ್ನ ಶಾಲಾ ಆವರಣದಲ್ಲಿ ಅನಿಲ ಸೋರಿಕೆಯಾದ ನಂತರ ಸುಮಾರು 100ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರು. ಆಸ್ಪತ್ರೆಯ ಅಧಿಕಾರಿಗಳ ಪ್ರಕಾರ, ಮಕ್ಕಳಿಗೆ ವಾಂತಿ ಕಾಣಿಸಿಕೊಂಡಿದೆ. ಅವರಲ್ಲಿ, ವಾಂತಿಯ ಗಂಭೀರ ಲಕ್ಷಣಗಳಿದ್ದ 67 ವಿದ್ಯಾರ್ಥಿಗಳನ್ನು ಹೊಸೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಅವರಿಗೆ ಐವಿ ದ್ರವಗಳು ಮತ್ತು ಔಷಧಿಗಳನ್ನು ನೀಡಲಾಯಿತು.
ಆಸ್ಪತ್ರೆಯ ಅಧಿಕಾರಿಗಳು ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಮಕ್ಕಳು ಅಸ್ವಸ್ಥತೆಯ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ಈ ಹಿನ್ನೆಲೆ, ರಕ್ತ ಮತ್ತು ವಾಂತಿಯ ಮಾದರಿಗಳನ್ನು ಪರೀಕ್ಷಿಸಲಾಗುತ್ತಿದೆ.
ಹೊಸೂರು ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಕೃಷ್ಣಗಿರಿ ಜಿಲ್ಲಾಧಿಕಾರಿ ವಿ.ಜಯಚಂದ್ರ ಭಾನು ರೆಡ್ಡಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…