ಚೆನ್ನೈ: ಎಐಎಡಿಎಂಕೆ ಪಕ್ಷದೊಂದಿಗೆ ಮೈತ್ರಿಯನ್ನು ತಾವು ವಿರೋಧಿಸುವುದಾಗಿ ಬಿಜೆಪಿ ತಮಿಳುನಾಡು ಅಧ್ಯಕ್ಷ ಕೆ. ಅಣ್ಣಾಮಲೈ ಪಕ್ಷದ ಆಂತರಿಕ ಸಭೆಯೊಂದರಲ್ಲಿ ಹೇಳಿದ್ದಾರೆ ಎನ್ನಲಾಗಿದ್ದು, ತಮಿಳುನಾಡಿನಲ್ಲಿ ದ್ರಾವಿಡ ಪಕ್ಷಗಳಿಗೆ ಪರ್ಯಾಯವಾಗಿ 2024ರ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡಬೇಕು ಎಂದು ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
ಶುಕ್ರವಾರ ಚೆನ್ನೈನಲ್ಲಿ ನಡೆದ ರಾಜ್ಯ ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಅಣ್ಣಾಮಲೈ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಹೈಕಮಾಂಡ್ ತಮಿಳುನಾಡಿನಲ್ಲಿ ಎಐಎಡಿಎಂಕೆಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ನಿರ್ಧರಿಸಿದರೆ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ಎಂದು ಹೇಳಿದ್ದಾರೆ ಎನ್ನಲಾಗಿದೆ.
‘ಬಿಜೆಪಿ ಮಹಿಳಾ ಮೋರ್ಚಾ ಮುಖ್ಯಪೈ, ಕೊಯಮತ್ತೂರು (ದಕ್ಷಿಣ) ಶಾಸಕಿ ವನತಿ ಶ್ರೀನಿವಾಸನ್ ಮತ್ತು ಉಪಾಧ್ಯಕ್ಷ ನಾರಾಯಣನ್ ತಿರುವು ಅವರು ಅಣ್ಣಾಮಲೈ ಅವರಿಂದ ಈ ಬಗ್ಗೆ ಸ್ಪಷ್ಟನೆ ಕೇಳಿದರು, ಆದರೆ, ಅಣ್ಣಾಮಲೈ ಅವರ ಅಭಿಪ್ರಾಯಕ್ಕೆ ಪಕ್ಷದ ಕೆಲವು ಮುಖಂಡರಿಂದ ಬೆಂಬಲ ದೊರೆಯಿತು, ಅವರು ಕೂಡ ಬಿಜೆಪಿ ಸ್ವಂತವಾಗಿ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ಅಭಿಪ್ರಾಯಪಟ್ಟರು’ ಎಂದು ಮೂಲಗಳು ಹೇಳಿದವು.