ತಮಿಳುನಾಡು

ಬಿಜೆಪಿ ಕಚೇರಿಗೆ ಬಾಂಬ್‌ ಎಸೆಯುವುದಾಗಿ ಇಮೇಲ್‌ ಬೆದರಿಕೆ

ಕೊಯಮತ್ತೂರು: ಬಿಜೆಪಿ ಕಚೇರಿ ಸೇರಿದಂತೆ ಹಲವೆಡೆ ಪೆಟ್ರೋಲ್ ಬಾಂಬ್ ಎಸೆಯುವುದಾಗಿ ಕೊಯಮತ್ತೂರು ಪೊಲೀಸರಿಗೆ ಬೆದರಿಕೆಯ ಇ-ಮೇಲ್ ಬಂದಿದೆ. ಕ್ರೈಮ್ ಆ್ಯಂಡ್ ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್‌ವರ್ಕ್ ಮತ್ತು ಸಿಸ್ಟಮ್ಸ್ ಪೋರ್ಟಲ್‌ಗೆ ಕಳುಹಿಸಲಾದ ಇಮೇಲ್‌ನಲ್ಲಿ ಬಿಜೆಪಿ ಕಚೇರಿಗಳು ಸೇರಿದಂತೆ ಅನೇಕ ಸ್ಥಳಗಳಲ್ಲಿ ಪೆಟ್ರೋಲ್ ಬಾಂಬ್‌ಗಳನ್ನು ಎಸೆಯಲಾಗುವುದು ಎಂದು ವರದಿಯಾಗಿದೆ.
ಶನಿವಾರ ರಾತ್ರಿ ಸಿಸಿಟಿಎನ್‌ಎಸ್‌ ಪೋರ್ಟಲ್ ಮೂಲಕ ಅಪರಿಚಿತ ವ್ಯಕ್ತಿಯೊಬ್ಬರು ಪೊಲೀಸ್ ಅಧಿಕಾರಿಗಳಿಗೆ ಬಾಂಬ್ ಬೆದರಿಕೆ ಮೇಲ್ ಕಳುಹಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರವನ್ನು ಖಂಡಿಸಲು ಕೊಯಮತ್ತೂರು ನಗರದ ಹಲವೆಡೆ ಪೆಟ್ರೋಲ್ ಬಾಂಬ್‌ಗಳನ್ನು ಎಸೆಯಲಾಗುವುದು ಎಂದು ವ್ಯಕ್ತಿ ಹೇಳಿಕೊಂಡಿದ್ದಾನೆ.
ಈಗಾಗಲೇ ದೀಪಾವಳಿ ಸಂದರ್ಭದಲ್ಲಿ ಭದ್ರತೆಯನ್ನು ಬಿಗಿಗೊಳಿಸಿರುವ ಕೊಯಮತ್ತೂರು ನಗರ ಪೊಲೀಸರು ಇದೀಗ ಬೆದರಿಕೆ ಇಮೇಲ್ ಕುರಿತು ತನಿಖೆ ಆರಂಭಿಸಿದ್ದಾರೆ.

ಅಕ್ಟೋಬರ್ 23ರಂದು ಕೊಯಮತ್ತೂರಿನ ಉಕ್ಕಡಂನಲ್ಲಿ ನಡೆದ ಕಾರ್ ಸ್ಫೋಟದಲ್ಲಿ ದೇವಸ್ಥಾನದ ಪಕ್ಕದಲ್ಲಿ ಕಾರಿನಲ್ಲಿ ಐಇಡಿ ಅಳವಡಿಸಿದ್ದ ಜಮೇಶಾ ಮುಬೀನ್ ಮೃತಪಟ್ಟಿದ್ದರು. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಕರಣದ ತನಿಖೆ ನಡೆಸುತ್ತಿದ್ದು, ಇದುವರೆಗೆ 14 ಶಂಕಿತರನ್ನು ಬಂಧಿಸಿದೆ

Umesha HS

Recent Posts

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

3 mins ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

20 mins ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

31 mins ago

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

1 hour ago

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

1 hour ago

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

2 hours ago