News Karnataka Kannada
Thursday, April 25 2024
Cricket
ತಮಿಳುನಾಡು

ಟಿಕೆಟ್ ಸಿಕ್ಕಿಲ್ಲ ಎಂದು ಮಾತ್ರೆ ಸೇವಿಸಿದ್ದ ಸಂಸದ ಚಿಕಿತ್ಸೆ ಫಲಿಸದೆ ಮೃತ್ಯು

Died
Photo Credit : NewsKarnataka

ಮಿಳುನಾಡು: ಮಾರ್ಚ್ 24 ರಂದು ಆತ್ಮಹತ್ಯೆಗೆ ಯತ್ನಿಸಿದ್ದ ಈರೋಡ್  ಸಂಸದ ಗಣೇಶಮೂರ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಅವರು ಕೊಯಮತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಗಣೇಶ್ ಮೂರ್ತಿ ಅವರು ಎಂಡಿಎಂಕೆ ಪಕ್ಷದ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದರು. 2019ರ ಲೋಕಸಭೆ ಚುನಾವಣೆಯಲ್ಲಿ ಈರೋಡೆ ಕ್ಷೇತ್ರದಲ್ಲಿ ಡಿಎಂಕೆ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂಸದರಾಗಿದ್ದರು.

2024ರ ಸಂಸತ್ ಚುನಾವಣೆಯಲ್ಲಿ ತಮಗೆ ಮತ್ತೊಮ್ಮೆ ಸೀಟು ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದರು. ಈ ಬಾರಿ ಡಿಎಂಕೆ ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳದೇ ಸ್ವತಂತ್ರವಾಗಿ ಸ್ಪರ್ಧೆ ಮಾಡ್ತಿದೆ. ಸೀಟು ಸಿಗದಿರೋದಕ್ಕೆ ಹತಾಸೆಗೊಂಡು ಮಾರ್ಚ್​ 24ರಂದು ಆತ್ಮಹತ್ಯೆಗೆ ಯತ್ನಿಸಿದ್ದರು.

ಮಾತ್ರ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿತ್ತು. ನಂತರ ಇವರ ಕುಟುಂಬ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದರು. ಇಂದು ಮುಂಜಾನೆ 5 ಗಂಟೆಗೆ ಹಠಾತ್ ಹೃದಯಾಘಾತವಾಗಿ ಗಣೇಶಮೂರ್ತಿ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು