News Karnataka Kannada
Sunday, May 05 2024
ತಮಿಳುನಾಡು

ಲಕ್ನೋ-ರಾಮೇಶ್ವರಂ ಟೂರಿಸ್ಟ್ ರೈಲಿನಲ್ಲಿ ಬೆಂಕಿ ಅವಘಡ: 9 ಮಂದಿ ಸಾವು

Fire breaks out in Lucknow-Rameswaram tourist train, 9 killed
Photo Credit : News Kannada

ಮಧುರೈ: ತಮಿಳುನಾಡಿನ ಮಧುರೈ ರೈಲು ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ಲಕ್ನೋ-ರಾಮೇಶ್ವರಂ ಟೂರಿಸ್ಟ್ ರೈಲಿನ ಖಾಸಗಿ ಬೋಗಿಯಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ.

ರೈಲ್ವೆ ಅಧಿಕಾರಿಗಳ ಪ್ರಕಾರ ಕೆಲವರು ಕೋಚ್‌ನಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದರು. ಚಹಾ ಮಾಡುತ್ತಿದ್ದಾಗ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ತನಿಖೆಯ ನಂತರವೇ ಈ ಬೆಂಕಿ ಅವಘಡದ ನಿರ್ದಿಷ್ಟ ಕಾರಣ ತಿಳಿದುಬರಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸದ್ಯ ಕೋಚ್‌ನಲ್ಲಿ ಸಿಲುಕಿರುವವರನ್ನು ಹೊರತರುವ ಪ್ರಯತ್ನ ನಡೆಯುತ್ತಿದೆ ಎಂದು ವರದಿಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು