ಚೆನ್ನೈ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಶನಿವಾರ ಪಟಾಕಿ ಸಂಗ್ರಹ ಗೋದಾಮಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ ಮತ್ತು 10 ಮಂದಿ ಗಾಯಗೊಂಡಿದ್ದಾರೆ.
ಐದು ಜನರು ಗೋಡೌನ್ನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಅಗ್ನಿಶಾಮಕ ತಂಡ ಮತ್ತು ಪೊಲೀಸರು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಬಲಿಯಾದವರ ಗುರುತುಗಳು ಇನ್ನೂ ಪತ್ತೆಯಾಗಿಲ್ಲ ಎಂದು ಕೃಷ್ಣಗಿರಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳವಾರ ವಿರುದುನಗರ ಜಿಲ್ಲೆಯ ಶಿವಕಾಶಿಯಲ್ಲಿ ಪಟಾಕಿ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಮಹಿಳಾ ಕಾರ್ಮಿಕರು ಸಾವನ್ನಪ್ಪಿದ್ದರು.