ಚೆನ್ನೈ: ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯ ತಿರುಚ್ಚಿ-ಮಧುರೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪೊಲೀಸರ ಪ್ರಕಾರ ಬುಧವಾರ ಮುಂಜಾನೆ ವಿರಾಲಿಮಲೈನಲ್ಲಿ ಈ ಘಟನೆ ನಡೆದಿದ್ದು, ಚೆನ್ನೈಗೆ ತೆರಳುತ್ತಿದ್ದ ಕಾರಿನ ಚಾಲಕ ವಾಹನದ ಮೇಲೆ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್ಗೆ ಡಿಕ್ಕಿ ಹೊಡೆದಿದೆ.
ವಿರಾಲಿಮಲೈ ಪೊಲೀಸರು ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಮಣಪ್ಪರೈ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದು, ಗಾಯಾಳು ಕೊಡಂಬಲೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರು ಮತ್ತು ಗಾಯಾಳುಗಳ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.