ಚೆನ್ನೈ: ಕರ್ನಾಟಕದಲ್ಲಿ ತೀವ್ರ ಬರಗಾಲದ ವಾತಾವರಣವಿದೆ. ಆದರೆ ನೆರೆಯ ತಮಿಳುನಾಡಿನಲ್ಲಿ ಬೇರೆಯದೇ ಸ್ಥಿತಿಯಿದೆ. ಅಲ್ಲಿ ಭಾರಿ ಮಳೆಯಾಗುತ್ತಿದ್ದ, ಅಣೆಕಟ್ಟುಗಳು ತುಂಬುತ್ತಿವೆ.
ಇದೀಗ ತಮಿಳುನಾಡಿನ ತಿರುವಳ್ಳೂರು, ಕಾಂಚೀಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳು ಸೇರಿದಂತೆ ತಮಿಳುನಾಡಿನ ನಾಲ್ಕು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಐಎಂಡಿ ಪ್ರಕಾರ ಮುಂದಿನ 24 ಗಂಟೆಗಳಲ್ಲಿ ಈ ನಾಲ್ಕು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.
ಕಳೆದ 24 ಗಂಟೆಗಳಲ್ಲಿ ಚೆನ್ನೈನ ನುಂಗಂಬಾಕ್ಕಂ ಪ್ರದೇಶದಲ್ಲಿ 5.88 ಸೆಂ.ಮೀ ಮಳೆಯಾಗಿದ್ದು, ಮೀನಂಬಾಕ್ಕಂನಲ್ಲಿ 7.12 ಸೆಂ.ಮೀ ಮಳೆಯಾಗಿದೆ ಎಂದು IMD ಡೇಟಾ ತೋರಿಸುತ್ತದೆ. ಶುಕ್ರವಾರದಂದು ನೈಋತ್ಯ ಬಂಗಾಳ ಕೊಲ್ಲಿಗೆ ಹೊಂದಿಕೊಂಡಂತೆ ಆಗ್ನೇಯ ಭಾಗದಲ್ಲಿ ಕಡಿಮೆ ಒತ್ತಡದಿಂದಾಗಿ ನಗರದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗಿದೆ.