News Karnataka Kannada
Thursday, May 02 2024
ತಮಿಳುನಾಡು

ತಮಿಳುನಾಡಿನ ಈ ಜಿಲ್ಲೆಗಳಿಗೆ 7 ದಿನಗಳ ಕಾಲ ಭಾರಿ ಮಳೆ ಎಚ್ಚರಿಕೆ

ದೆಹಲಿ, ಉತ್ತರ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ, ಉತ್ತರ ಪ್ರದೇಶದಲ್ಲಿ ಆಲಿಕಲ್ಲು ಮಳೆ ಸುರಿದಿದೆ. ಹಮೀರ್‌ಪುರ, ಬಂದಾ ಮತ್ತು ಜಲೌನ್‌ನಲ್ಲಿ ಭಾರೀ ಮಳೆಯೊಂದಿಗೆ ಆಲಿಕಲ್ಲು ಕೂಡ ಬಿದ್ದಿದೆ.
Photo Credit : News Kannada

ಚೆನ್ನೈ: ಮಿಚಾಂಗ್ ಚಂಡಮಾರುತ ಪ್ರಭಾವದಿಂದ ದೇಶದ ಕೆಲವೆಡೆ ಹಲವು ದಿನಗಳಿಂದ ಅಬ್ಬರದ ಮಳೆಯಾಗಿತ್ತು. ಅದರಲ್ಲೂ ತಮಿಳುನಾಡಿನ ಚೆನ್ನೈನಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿದ್ದವು. ಹಾಗೆಯೇ ಮುಂದಿನ 7 ದಿನಗಳ ಕಾಲ ತಮಿಳುನಾಡಿನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಭಾನುವಾರ ಮುನ್ಸೂಚನೆ ನಿಡಿದೆ.

ಪಾಳ್ಯಂಕೊಟ್ಟೈ ಎಂಬಲ್ಲಿ ದಾಖಲೆಯ 260 ಮಿಲಿಮೀಟರ್ ಮಳೆಯಾಗಿದೆ. ತೂತುಕುಡಿ ಜಿಲ್ಲೆಯ ಶ್ರೀವೈಕುಂಠಂನಲ್ಲಿ ಇಂದು ಬೆಳಗ್ಗೆ 6 ರಿಂದ ರಾತ್ರಿ 9 ಗಂಟೆಯವರೆಗೆ ಸುಮಾರು 500 ಮಿ.ಮಿ ಮಳೆಯಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಆಗಲಿದೆ ಎಂದು ಐಎಂಡಿ ಹೇಳಿದೆ.

ಸೋಮವಾರ ಭಾರೀ ಮಳೆ ಹಿನ್ನೆಲೆ ತಮಿಳುನಾಡಿನ ರಾಮನಾಥಪುರಂ, ಶಿವಗಂಗಾ, ಪುದುಕೊಟ್ಟೈ, ತಂಜಾವೂರು, ವಿರುಧನಗರ ಮತ್ತು ಥೇಣಿ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಹಳದಿ ಅಲರ್ಟ್ ನೀಡಿದೆ. ದಕ್ಷಿಣ ತಮಿಳುನಾಡಿನ ಅನೇಕ ಸ್ಥಳಗಳಲ್ಲಿ, ಉತ್ತರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು