News Karnataka Kannada
Monday, April 29 2024
ತಮಿಳುನಾಡು

ತಮಿಳುನಾಡಿನಲ್ಲಿ ಮಂಗಳವಾರವೂ ಮುಂದುವರಿದ ಭಾರಿ ಮಳೆ

Heavy rains continue to lash Tamil Nadu on Tuesday
Photo Credit : News Kannada

ಚೆನ್ನೈ: ದಕ್ಷಿಣ ತಮಿಳುನಾಡಿನಲ್ಲಿ ಮಂಗಳವಾರವೂ ಭಾರೀ ಮಳೆ ಮುಂದುವರಿದ್ದು, ಮಳೆ ಸಂಬಂಧಿತ ಅವಘಡಗಳಿಂದ ಮೂರೂ ಜನ ಸಾವನ್ನಪ್ಪಿದ್ದಾರೆ.

ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಿಂದಾಗಿ ಭತ್ತದ ಗದ್ದೆಗಳು, ರಸ್ತೆಗಳು ಮತ್ತು ಸೇತುವೆಗಳು ಮುಳುಗಿವೆ ಮತ್ತು ಅನೇಕ ವಸತಿ ಕಾಲೋನಿಗಳು ಜಲಾವೃತಗೊಂಡಿವೆ. ಪ್ರವಾಹದ ಪರಿಣಾಮ ಹಲವಾರು ಸ್ಥಳಗಳಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದೆ.

ರಾಜ್ಯದಲ್ಲಿ ಅತಿ ಹೆಚ್ಚು ಹಾನಿಗೊಳಗಾದ ಜಿಲ್ಲೆಗಳಾದ ಕನ್ಯಾಕುಮಾರಿ, ತಿರುನಲ್ವೇಲಿ, ತೂತುಕುಡಿ ಮತ್ತು ತೆಂಕಶಿಗೆ ಇಂದು ಭಾರತೀಯ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ.

ಉತ್ತರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನ ಪ್ರತ್ಯೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ ಎಂದು ಐಎಂಡಿ ತಿಳಿಸಿದೆ. ದಕ್ಷಿಣ ತಮಿಳುನಾಡಿನಲ್ಲಿ ಸುಮಾರು 39 ಪ್ರದೇಶಗಳು ಭಾರೀ ಮಳೆಗೆ ಸಾಕ್ಷಿಯಾಗಿದೆ.

ಹವಾಮಾನ ಇಲಾಖೆಯ ಪ್ರಕಾರ, ಗಂಟೆಗೆ 40-45 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಇದು ಗಂಟೆಗೆ 55 ಕಿಲೋಮೀಟರ್‌ಗಳವರೆಗೆ ವೇಗ ಪಡೆದುಕೊಳ್ಳುವ ಸಾಧ್ಯತೆ ಇದೆ.

ದಕ್ಷಿಣ ತಮಿಳುನಾಡು ಕರಾವಳಿಯ ಮನ್ನಾರ್ ಕೊಲ್ಲಿ, ಕೊಮೊರಿನ್ ಪ್ರದೇಶ, ಲಕ್ಷದ್ವೀಪ ಪ್ರದೇಶ ಮತ್ತು ಪಕ್ಕದ ಆಗ್ನೇಯ ಅರಬ್ಬಿ ಸಮುದ್ರದ ವ್ಯಾಪ್ತಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು