News Karnataka Kannada
Friday, May 10 2024
ತಮಿಳುನಾಡು

ಇಂದು ಸಂಜೆ 6.04ಕ್ಕೆ ಲ್ಯಾಂಡಿಂಗ್: ಯೋಜನೆಯಲ್ಲಿ ಬದಲಾವಣೆಯಿಲ್ಲ ಎಂದ ಇಸ್ರೋ ಅಧ್ಯಕ್ಷ

Isro chairman says there is no change in plan for landing at 6.04 pm today
Photo Credit : IANS

ಚೆನ್ನೈ: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಚಂದ್ರನ ಮೇಲೆ ಪೂರ್ವಯೋಜನೆಯಂತೆ ಚಂದ್ರನ ಮೇಲೆ ಲ್ಯಾಂಡರ್‌ ಅನ್ನು ಇಳಿಸುತ್ತದೆ ಎಂದು ಇಸ್ರೋ ಅಧ್ಯಕ್ಷ ಸೋಮನಾಥ್‌ ಹೇಳಿದ್ದಾರೆ.

ಆಗಸ್ಟ್‌ 27ರಂದು ಚಂದ್ರನ ಮೇಲೆ ವಿಕ್ರಮ್‌ ಲ್ಯಾಂಡ್ ಆಗಲಿದೆ ಎಂಬ ಪ್ರಶ್ನೆ ಕುರಿತು ಈ ಮೇಲಿನಂತೆ ಸ್ಪಷ್ಟನೆ ನೀಡಿದ್ದಾರೆ. ಮೊದಲು ಯೋಜಿಸಿದಂತೆ ಆಗಸ್ಟ್‌ 23ರ ಸಂಜೆ 6.04 ನಿಮಿಷಕ್ಕೆ ವಿಕ್ರಮ್‌ ಲ್ಯಾಂಡರ್‌ ಚಂದ್ರನ ಮೇಲೆ ಕಾಲಿಡಲಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸೋಮನಾಥ್‌ ತಿಳಿಸಿದ್ದಾರೆ.

ಚಂದ್ರಯಾನದ ಎಲ್ಲ ವ್ಯವಸ್ಥೆಗಳು ಸಮರ್ಪಕವಾಗಿದೆ. ಸಿಸ್ಟಮ್‌ಗಳು ನಿಯಮಿತ ತಪಾಸಣೆಗೆ ಒಳಗಾಗುತ್ತಿವೆ. ಸುಗಮ ನೌಕಾಯಾನ ಮುಂದುವರಿಯುತ್ತಿದೆ. ಮಿಷನ್ ಆಪರೇಷನ್ಸ್ ಕಾಂಪ್ಲೆಕ್ಸ್ (MOX) ಉತ್ಸಾಹದಿಂದ ಮುಂದುವರಿಯುತ್ತಿದೆ ಎಂದು ಹೇಳಿದ್ದಾರೆ. ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದೆ. ಕೊನೆಯ ಗಳಿಗೆಯಲ್ಲಿ ಯಾವುದೇ ಸಮಸ್ಯೆ ಉಂಟಾದರೆ, ಪ್ಲಾನ್ ಬಿ ಕೈಗೊಳ್ಳುವ (ಆ.27ರ ಲ್ಯಾಂಡಿಂಗ್)‌ ಸಾಧ್ಯತೆ ಇದೆ. ಮೂನ್ ಲ್ಯಾಂಡರ್ ತನ್ನ ಲ್ಯಾಂಡರ್ ಪೊಸಿಷನ್ ಡಿಟೆಕ್ಷನ್ ಕ್ಯಾಮೆರಾ (LPDC) ದೊಂದಿಗೆ ಲ್ಯಾಂಡಿಂಗ್ ಸೈಟ್‌ನ ಚಿತ್ರಗಳನ್ನು ಸೆರೆಹಿಡಿಯುತ್ತಿದೆ.

ಮೂನ್ ಲ್ಯಾಂಡರ್  ಹಜಾರ್ಡ್ ಡಿಟೆಕ್ಷನ್ ಅಂಡ್ ಅವಾಯಿಡೆನ್ಸ್ ಕ್ಯಾಮೆರಾ (LHDAC) ಎಂಬ ಮತ್ತೊಂದು ಕ್ಯಾಮೆರಾವನ್ನು ಸಹ ಹೊಂದಿದೆ. ಈ ಕ್ಯಾಮರಾ ಬಂಡೆಗಳು ಅಥವಾ ಆಳವಾದ ಕಂದಕಗಳಿಲ್ಲದ ಸುರಕ್ಷಿತ ಲ್ಯಾಂಡಿಂಗ್ ಪ್ರದೇಶವನ್ನು ಪತ್ತೆಹಚ್ಚಲು ಸಹಾಯ ಮಾಡುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು