ತಮಿಳುನಾಡು

ತಮಿಳುನಾಡಿನಲ್ಲಿ ಮತ್ತೆ ಚಿಗುರೊಡೆಯಿತೇ ಎಲ್‌ಟಿಟಿಇ: ಮಾದಕ ಸದಸ್ಯರು ಹೇಳಿದ್ರು ಶಾಕಿಂಗ್ ಸುದ್ದಿ

ಚೆನ್ನೈ: ತಮಿಳುನಾಡು ಪೊಲೀಸರು ನಾಗಪಟ್ಟಣಂ ಪಟ್ಟಣದಲ್ಲಿ 300 ಕೆಜಿ ಮಾದಕವಸ್ತು ಸಹಿತ ಆರು ಮಂದಿಯನ್ನು ಬಂಧಿಸಿದ್ದಾರೆ.

ಆರೋಪಿಗಳನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಬುಧವಾರ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆಂಧ್ರಪ್ರದೇಶ ಮತ್ತು ಒಡಿಶಾದ ಗಡಿಯಿಂದ ಮಾದಕವಸ್ತುಗಳನ್ನು ಖರೀದಿಸಿ ಶ್ರೀಲಂಕಾಕ್ಕೆ ಸಾಗಿಸಲಾಗುತ್ತಿತ್ತು ಎಂದು ಆರೋಪಿಗಳು ವಿಚಾರಣೆ ವೇಳೆ ತಿಳಿಸಿದ್ದಾರೆ. ಈ ನಡುವೆಯೇ ಮತ್ತೊಂದು ಭಯಾನಕ ವಿಚಾರ ಬೆಳಕಿಗೆ ಬಂದಿದ್ದು, ತಮಿಳುನಾಡಿನ ನಾಗಪಟ್ಟಣಂ ಮತ್ತು ರಾಮೇಶ್ವರಂ ಕರಾವಳಿಯ ಕೆಲ ಜನರು
ಎಲ್‌ಟಿಟಿಇ ಭಾಗವಾಗಿ ಈ ಮಾದಕ ವಸ್ತು ಜಾಲ ಕಾರ್ಯಚರಣೆ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ಟೋಬರ್ 2021 ರಲ್ಲಿ, ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಎಲ್‌ಟಿಟಿಇಯ ಮಾಜಿ ಉನ್ನತ ಕಾರ್ಯಕರ್ತ ಸಂತುಕಮ್ ಅಲಿಯಾಸ್ ಸಬೇಶನನ್ನು ಬಂಧಿಸಿತ್ತು. ಪ್ರಕರಣದ ತನಿಖೆ ನಡೆಸಿದ ತಮಿಳುನಾಡು ಭದ್ರತಾ ಏಜೆನ್ಸಿಗಳು ಸಬೇಶನ್‌ ಶ್ರೀಲಂಕಾದ ‘ಕ್ರಿಮಿನಲ್’ ಅಂಗೋಡ ಲೊಕ್ಕ ಅವರೊಂದಿಗೆ ಸಂಪರ್ಕ ಹೊಂದಿದ್ದ ಎಂಬುದು ದೃಢಪಟ್ಟಿತ್ತು. ಬಂಧಿತರು ಎಲ್‌ಟಿಟಿಇಯನ್ನು ಪುನರುಜ್ಜೀವನಗೊಳಿಸಲು ಪ್ರಯತ್ನಿಸುತ್ತಿದ್ದು ಈ ನಿಟ್ಟಿನಲ್ಲಿ ಹಣ ಸಂಗ್ರಹಿಸಲು ಮಾದಕ ದ್ರವ್ಯ ಜಾಲವನ್ನು ಬಳಸುತ್ತಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾರ್ಚ್ 2021 ರಲ್ಲಿ, ಕೋಸ್ಟ್ ಗಾರ್ಡ್ ಅರಬ್ಬಿ ಸಮುದ್ರದ ಮಿನಿಕಾಯ್ ದ್ವೀಪದ ಬಳಿ ‘ರಾಹಿವಂಶಿ’ ದೋಣಿಯಿಂದ 300 ಕೆಜಿ ಹೆರಾಯಿನ್ ಮತ್ತು ಐದು AK 47 ಅಸಾಲ್ಟ್ ರೈಫಲ್‌ಗಳು ಮತ್ತು 1000 ಪೆಲೆಟ್‌ಗಳನ್ನು ವಶಪಡಿಸಿಕೊಂಡಿದ್ದರು. ಇದೀಗ ಸಿಕ್ಕಿಬಿದ್ದಿರುವ ಮಾದಕವಸ್ತು, ಮತ್ತು ಆರೋಪಿಗಳು ತಮಿಳು ಉಗ್ರರ ಸಂಘಟನೆಯ ಟ್ರಯಲ್‌ ರನ್‌ ರನ್ ಭಾಗವಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

Ashika S

Recent Posts

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

43 mins ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

58 mins ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

2 hours ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

2 hours ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

2 hours ago