ಚೆನ್ನೈ: ಈ ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಬಿಡಬಾರದು ಎಂಬ ಒಂದೇ ಗುರಿಯನ್ನು ಎಲ್ಲರೂ ಹೊಂದಿರಬೇಕು ಎಂದು ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ.
ಅವರು ತಿರುಚಿನಾಪಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಈ ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬಾರದು ಎಂಬುದೋಂದೇ ನಮ್ಮ ಗುರಿಯಾಗಿರಬೇಕು. ಅದಕ್ಕಾಗಿ ಮತಗಳು ವಿಭಜನೆಯಾಗದಂತೆ ನೋಡಿಕೊಳ್ಳಬೇಕು ಎಂದರು.
ಈ ದೇಶದಲ್ಲಿ ಮತ್ತೆ ಬಿಜೆಪಿಯನ್ನ ಅಧಿಕಾರಕ್ಕೆ ಬರಲು ಬಿಡಬಾರದು ಎಂಬ ಗುರಿ ಪ್ರತಿಯೊಬ್ಬರಿಗೂ ಇರಬೇಕು. ಅದು ಒಂದು ವೇಳೆ ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆ ಇರುವುದಿಲ್ಲ ಎಂದು ಹೇಳಿದರು.