ತಮಿಳುನಾಡು: ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಐಸಿಸ್ ಉಗ್ರ ಸೈಯದ್ ನಬೀಲ್ನನ್ನು ತಮಿಳುನಾಡಿನಲ್ಲಿ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಈತ ತ್ರಿಶೂರ್ ಮೂಲದ ಘಟಕದ ಐಸಿಸ್ ಉಗ್ರ ಸಂಘಟನೆಯ ನಾಯಕನಾಗಿದ್ದ.
ಆತ ಕೇರಳದಲ್ಲಿ ದುಷ್ಕೃತ್ಯ ನಡೆಸಲು ಸಂಚು ರೂಪಿಸಿದ್ದ, ಸಂಚು ಬಯಲಾದ ಹಿನ್ನೆಲೆ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಕರ್ನಾಟಕ, ತಮಿಳುನಾಡು ಹೀಗೆ ಹಲವು ನಗರಗಳಲ್ಲಿ ಸುತ್ತಾಡಿದ್ದ, ವಿದೇಶಕ್ಕೆ ಪರಾರಿಯಾಗಲು ಸಿದ್ಧತೆ ನಡೆಸಿದ್ದ ಅಷ್ಟರೊಳಗೆ ಉಗ್ರನನ್ನು ಸೆರೆಹಿಡಿಯಲಾಗಿದೆ.
ಎನ್ಐಎ ಈ ಹಲವಾರು ಗುಂಪುಗಳನ್ನು ಭೇದಿಸಿದೆ ಮತ್ತು ನಿಷೇಧಿತ ಸಂಘಟನೆಯ ಭಯೋತ್ಪಾದಕ ಕಾರ್ಯಸೂಚಿಯನ್ನು ತಡೆಯಲು ರಾಜ್ಯಗಳಾದ್ಯಂತ ಕಾರ್ಯನಿರ್ವಹಿಸುತ್ತಿರುವ ಹಲವು ಐಸಿಸ್ ಸದಸ್ಯರು ಮತ್ತು ಕಾರ್ಯಕರ್ತರನ್ನು ಬಂಧಿಸಿದೆ ಎಂದು ಅಧಿಕಾರಿ ಹೇಳಿದರು.